ರಾಜ್ಯ

ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ಪರ ಮತ ಪ್ರಚಾರ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ. ಸಿ.ಎನ್ ಮಂಜುನಾಥ್ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯೋರ್ವನ ಮೇಲೆ ಹಲ್ಲೆ ನಡಸಿರುವ ಆರೋಪ ಕೇಳಿಬಂದಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರ ಕೂಡ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಬರುತ್ತದೆ. ಇಲ್ಲಿ‌ ಜೆಡಿಎಸ್ ಬೆಂಬಲಿತ ಗ್ರಾಪಂ ಸದಸ್ಯ ಮಂಜುನಾಥ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದೆ.

ಕೆಂಪನಹಳ್ಳಿ ನಿವಾಸಿ ಬೋರೇಗೌಡ ಮತ್ತು ಅವರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಮಾತನಾಡಬೇಕೆಂದು ಮಂಜುನಾಥ್ ಅವರನ್ನು ಕರೆಸಿಕೊಂಡಿದ್ದ ಬೋರೇಗೌಡ ಮತ್ತು ಬೆಂಬಲಿಗರು, ಅಂಚೆಪಾಳ್ಯದ ಬಳಿ ಬರುತ್ತಿದ್ದಂತೆ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡಿರುವ ಮಂಜುನಾಥ್ ಅವರನ್ನು ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

6 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

8 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

9 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

9 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

9 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

9 hours ago