ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಸಚಿವ ಎ.ಮಂಜು ಆಗ್ರಹಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಮಂಜು ಅವರು, ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಸಿಎಂ ಸಿದ್ದರಾಮಯ್ಯ ಲಾಯರ್ ಆಗಿದ್ದವರು. ಆದ್ದರಿಂದ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು. ಅವರು ರಾಜೀನಾಮೆ ಕೊಡಲ್ಲ ಅಂದರೆ ಕಾನೂನು ಇದೆ. ಅದರ ಪ್ರಕಾರವೇ ಕ್ರಮ ಆಗುತ್ತದೆ ಎಂದರು.
ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟ್ ಪಡೆದಿರೋದು ನಿಜ ಎಂದು ಸಾಬೀತಾಗಿದೆ. ಬದಲಾವಣೆ ಸೈಟ್ ಪಡೆದುಕೊಂಡಿದ್ದಾರೆ. ಇದನ್ನು ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ನಿರ್ದೋಷಿ ಅಂತ ಆದ ಮೇಲೆ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದರು.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…