Mysore
20
overcast clouds

Social Media

ಮಂಗಳವಾರ, 27 ಜನವರಿ 2026
Light
Dark

ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ: ಸಿಎಂಗೆ ಪತ್ರ ಬರೆದ ಕೈ ಮುಖಂಡರು

ಬೆಂಗಳೂರು: ರಾಜ್ಯದಲ್ಲಿ 1 ಲಕ್ಷ ಕೋಟಿ ಮೊತ್ತದ ಗಣಿ ಹಗರಣ ನಡೆದಿದೆ. ಈ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಕೋರಿ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಚ್.ಎಂ.ರೇವಣ್ಣ, ಡಾ.ಸಿ.ಎಸ್.ದ್ವಾರಕಾನಾಥ್, ವಿ.ಆರ್.ಸುದರ್ಶನ್, ಡಾ.ಎಲ್.ಹನುಮಂತಯ್ಯ, ಮೋಹನ್ ಕೊಂಡಜ್ಜಿ ಅವರು ಪತ್ರ ಬರೆದಿದ್ದಾರೆ.

ಇದನ್ನು ಓದಿ; ‘ದೂರದರ್ಶನ’ ನಿರ್ದೇಶಕರ ಚಿತ್ರದಲ್ಲಿ ‘ಪೀಟರ್‍’ ಆದ ರಾಜೇಶ್‍ ಧ್ರುವ

ಅಕ್ರಮ ಗಣಿಗಾರಿಕೆ ವಿಚಾರದ ಕುರಿತು ಅಧ್ಯಯನ ನಡೆಸಲು ಕಾನೂನು ಸಚಿವ ಎಚ್.ಕೆ. ಪಾಟೀಲ್ ನೇತೃತ್ವದಲ್ಲಿ ರಚಿಸಲಾಗಿದ್ದ ಸಂಪುಟ ಉಪ ಸಮಿತಿ ಸರಕಾರಕ್ಕೆ ಸಲ್ಲಿಸಿದ ವರದಿಯಂತೆ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆ ಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿರುವುದು ತಿಳಿದು ಬಂದಿದೆ. ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ವರದಿಯನ್ನು ರಾಜ್ಯ ಸರಕಾರ ಸ್ವೀಕರಿಸಿದ್ದರೂ ಇದುವರೆಗೂ ಯಾವುದೇ ಕ್ರಮವಹಿಸಿಲ್ಲ. ಆದ್ದರಿಂದ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕೆಲವು ವ್ಯಕ್ತಿ, ಸಂಘ-ಸಂಸ್ಥೆಗಳು, ರಾಜಕಾರಣಿಗಳು ಮತ್ತು ಅಧಿಕಾರಿಗಳ ಸಹಕಾರದಿಂದ ಅಕ್ರಮವಾಗಿ 1ಲಕ್ಷ ಕೋಟಿ ರೂ. ಬೆಲೆಬಾಳುವ ಕಬ್ಬಿಣದ ಅದಿರನ್ನು ಲೂಟಿ ಮಾಡಿ, ಸರಕಾರದ ಬೊಕ್ಕಸಕ್ಕೆ ನಷ್ಟವುಂಟು ಮಾಡಿದ್ದಾರೆ. ಆದ್ದರಿಂದ ಕಾನೂನು ಸಚಿವ ಎಚ್.ಕೆ.ಪಾಟೀಲ್ ನೇತೃತ್ವದ ಸಂಪುಟ ಉಪ ಸಮಿತಿ ನೀಡಿರುವ ವರದಿಯಂತೆ ತಪ್ಪಿತಸ್ಥರು ಯಾವುದೇ ಪಕ್ಷದವರಾಗಿದ್ದರೂ, ಯಾವುದೇ ಅಧಿಕಾರಿಗಳಾಗಿರಲಿ, ಯಾವುದೇ ಸಂಘ-ಸಂಸ್ಥೆಯವರಾಗಿರಲಿ ಅಂತವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags:
error: Content is protected !!