Mysore
32
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್‌.ಅರುಣ್‌ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ 24 ಜನ ಪಾಕಿಸ್ತಾನ, 159 ಮಂದಿ ಬಾಂಗ್ಲಾದೇಶಿಯರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ 115 ಮಂದಿ ನಕಲಿ ದಾಖಲೆ ಮೂಲಕ ಭಾರತದಲ್ಲಿ ವಾಸವಿರುವುದು ತಿಳಿದುಬಂದಿದೆ. ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದರು.

ನಕಲಿ ದಾಖಲೆ ಸೃಷ್ಟಿಸಿ ಭಾರತಕ್ಕೆ ಪ್ರವೇಶಿಸುವ ಪ್ರಜೆಗಳನ್ನು ಕಂಡುಹಿಡಿಯಲು ಬೆಂಗಳೂರಿನಲ್ಲಿ ವಿಶೇಷ ಘಟಕ ಸ್ಥಾಪಿಸಲಾಗಿದೆ. ಅಕ್ರಮವಾಗಿ ವಲಸೆ ಬರುವುದು ಹೊಸದೇನಲ್ಲ. ಬಾರ್ಡರ್‌ನಲ್ಲಿ ಸೈನಿಕರು ಅಕ್ರಮ ವಲಸೆ ತಡೆಗಟ್ಟುವಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ಆದರೂ ಹೇಗೆ ಬರುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಪ್ರತಿವರ್ಷ ಅಕ್ರಮ ವಲಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಆಫ್ರಿಕಾದಿಂದ ಸ್ಟೂಡೆಂಟ್‌ ವಿಸಾದಲ್ಲಿ ಭಾರತಕ್ಕೆ ಬಂದು ಡ್ರಂಗ್‌ ದಂಧೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಈ ರೀತಿ ಅಕ್ರಮವಾಗಿ ಬಂದು ಇಲ್ಲಿ ಡ್ರಗ್‌ ದಂಧೆ ಜೊತೆಗೆ ಇನ್ನಿತರ ಕಾರ್ಯಚಟುವಟಿಕೆಯಲ್ಲಿ ತೊಡಗಿರುವವರನ್ನು ಪತ್ತೆಹಚ್ಚಲು ಪ್ರತಿ ಜಿಲ್ಲೆಯಲ್ಲೂ ಸ್ಪೆಷಲ್‌ ಟಾಸ್ಕ್‌ ಪೋರ್ಸ್‌ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

Tags:
error: Content is protected !!