ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ ಪ್ರಶ್ನೆಗೆ ಉತ್ತರಿಸಿದ ಅವರು, ನಕಲಿ ದಾಖಲೆ ಸೃಷ್ಠಸಿ ಭಾರತದಲ್ಲಿ ನೆಲೆಸಿದ್ದ 24 ಜನ ಪಾಕಿಸ್ತಾನ, 159 ಮಂದಿ ಬಾಂಗ್ಲಾದೇಶಿಯರನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೇ 115 ಮಂದಿ ನಕಲಿ ದಾಖಲೆ ಮೂಲಕ ಭಾರತದಲ್ಲಿ ವಾಸವಿರುವುದು ತಿಳಿದುಬಂದಿದೆ. ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮ ಪೊಲೀಸರು ಕೂಡ ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ ಎಂದರು.
ನಕಲಿ ದಾಖಲೆ ಸೃಷ್ಟಿಸಿ ಭಾರತಕ್ಕೆ ಪ್ರವೇಶಿಸುವ ಪ್ರಜೆಗಳನ್ನು ಕಂಡುಹಿಡಿಯಲು ಬೆಂಗಳೂರಿನಲ್ಲಿ ವಿಶೇಷ ಘಟಕ ಸ್ಥಾಪಿಸಲಾಗಿದೆ. ಅಕ್ರಮವಾಗಿ ವಲಸೆ ಬರುವುದು ಹೊಸದೇನಲ್ಲ. ಬಾರ್ಡರ್‌ನಲ್ಲಿ ಸೈನಿಕರು ಅಕ್ರಮ ವಲಸೆ ತಡೆಗಟ್ಟುವಲ್ಲಿ ನಿರಂತರ ಕೆಲಸ ಮಾಡುತ್ತಿದ್ದಾರೆ. ಆದರೂ ಹೇಗೆ ಬರುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಪ್ರತಿವರ್ಷ ಅಕ್ರಮ ವಲಸೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ಅಕ್ರಮವಾಗಿ ಇರೋರನ್ನು ಗಡಿಪಾರು ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಆಫ್ರಿಕಾದಿಂದ ಸ್ಟೂಡೆಂಟ್ ವಿಸಾದಲ್ಲಿ ಭಾರತಕ್ಕೆ ಬಂದು ಡ್ರಂಗ್ ದಂಧೆ ಮಾರಾಟ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಇದೆ. ಈ ರೀತಿ ಅಕ್ರಮವಾಗಿ ಬಂದು ಇಲ್ಲಿ ಡ್ರಗ್ ದಂಧೆ ಜೊತೆಗೆ ಇನ್ನಿತರ ಕಾರ್ಯಚಟುವಟಿಕೆಯಲ್ಲಿ ತೊಡಗಿರುವವರನ್ನು ಪತ್ತೆಹಚ್ಚಲು ಪ್ರತಿ ಜಿಲ್ಲೆಯಲ್ಲೂ ಸ್ಪೆಷಲ್ ಟಾಸ್ಕ್ ಪೋರ್ಸ್ ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…
ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…
ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…