ರಾಜ್ಯ

ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ ಆಗೋದು ಪಕ್ಕಾ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ಕಾಂಗ್ರೆಸ್‌ ಜೊತೆಗೆ ಬಿಜೆಪಿ ಪಕ್ಷದಲ್ಲೂ ನವೆಂಬರ್‌ ಕ್ರಾಂತಿ ಆಗೋದು ಪಕ್ಕಾ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗುತ್ತದೆ. ನಾನು ಕಹಿ ಹಾಗೂ ಸಿಹಿ ಎರಡನ್ನೂ ಸ್ವೀಕರಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:-ರಂಗೇರಿದ ಬಿಹಾರ ವಿಧಾನಸಭಾ ಕಣ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಜೊತೆಗೆ ಬಿಜೆಪಿಯಲ್ಲೂ ನವೆಂಬರ್‌ನಲ್ಲಿ ಕ್ರಾಂತಿ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರನ್ನು ತೆಗೆಯಲು ದೊಡ್ಡ ಗುಂಪೊಂದು ಕಾದು ಕುಳಿತಿದೆ. ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ತೆಗೆದರೆ ಯಡಿಯೂರಪ್ಪ ಸುಮ್ಮನೆ ಇರಲ್ಲ ಎಂದರು.

ಇನ್ನು 1972ರಲ್ಲಿ ಡಿ.ದೇವರಾಜ ಅರಸು ಅವರು ಶಾಸಕರಲ್ಲದಿದ್ದರೂ ಸಿಎಂ ಆಗಿದ್ದರು. ಇದಕ್ಕೆಲ್ಲಾ ಅಂದಿನ ಶಾಸಕರ ಅಭಿಪ್ರಾಯವೇ ಕಾರಣವಾಗಿತ್ತು. ಸಿದ್ದರಾಮಯ್ಯ ಒಬ್ಬ ಎಲೆಕ್ಟೆಡ್‌ ಮುಖ್ಯಮಂತ್ರಿ. ಮುಂದೆ ಏನಾದರೂ ಸಿಎಂ ಬದಲಿಸಬೇಕಾದರೆ ವೀಕ್ಷಕರನ್ನು ಕಳುಹಿಸಿ ಎಐಸಿಸಿ ಅಭಿಪ್ರಾಯ ಸಂಗ್ರಹಿಸುತ್ತದೆ. ಈ ಎಲ್ಲಾ ಗೊಂದಲಕ್ಕೆ ಹೈಕಮಾಂಡ್‌ ತೆರೆ ಎಳೆಯಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

21 mins ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

1 hour ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

1 hour ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

2 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

2 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

6 hours ago