ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲ ನಕ್ಷೆ ಎಂದು ಎಫ್‌ಕೆಸಿಸಿಐನ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಅವರು ಸ್ವಾಗತಿಸಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಾರಿಯ ಬಜೆಟ್ ಸುಮಾರು 4 ಲಕ್ಷ ಕೋಟಿ ರೂಗಳ ಬಜೆಟ್ ಅಗಿದ್ದು, ಕರ್ನಾಟಕದ ಸುಸ್ಥಿರ ಅಭಿವೃದ್ದಿ ಗುರಿಗಳನ್ನು ಸಾಧಿಸಲು ಈ ಬಜೆಟ್ ಅಂತಿಮ ನಿರ್ಣಯವಾಗಲಿದೆ ಎಂದು ಹೇಳಿದರು.
ರಾಜ್ಯಾದಾದ್ಯಾಂತ ಮೂಲ ಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿನ ಹೂಡಿಕೆಗಳ ಸಮಾನ ಬೇಳವಣಿಗೆಯನ್ನು ಖಚಿತ ಪಡಿಸಿಕೊಳ್ಳಲು, ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಈ ಬಜೆಟ್ ಅನ್ನು ವಿನ್ಯಾಸಗೊಳಿಸಲಾಗಿದೆ. ಆದರೆ, ಮೂಲ ಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಿಖರವಾದ ಯೋಜನೆ ಮತ್ತು ಸಮನ್ವಯದ ಅವಶಯಕತೆ ಇದೆ ಎಂದರು.
ಒಂದು ಟ್ರಿಲಿಯನ್ ಆರ್ಥಿಕ ರಾಜ್ಯಾವಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಟ್ಟ ಹೆಜ್ಜೆ ಇರಿಸಿದ್ದಾರೆ. ಸರ್ವಜನರ ಅಭಿವೃದ್ದಿಗಾಗಿ ಸಮ ಸಮಾಜ ನಿರ್ಮಾಣ ಮಾಡುವ ಹಿತದೃಷ್ಠಿಯಿಂದ ಈ ಬಜೆಟ್ ಅನ್ನು ಮಂಡಿಸಿದ್ದಾರೆ ಎಂದು ಹೊಗಳಿದ್ದಾರೆ.





