ರಾಜ್ಯ

ಸುಸ್ಥಿರ ಅಭಿವೃದ್ದಿಗೆ ಪ್ರಾಯೋಗಿಕ ನೀಲನಕ್ಷೆ: ಎಂ.ಜಿ ಬಾಲಕೃಷ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್‌ ಸುಸ್ಥಿರ ಬೆಳವಣಿಗೆಗೆ ಪ್ರಾಯೋಗಿಕ ನೀಲ ನಕ್ಷೆ ಎಂದು ಎಫ್‌ಕೆಸಿಸಿಐನ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ ಅವರು ಸ್ವಾಗತಿಸಿದ್ದಾರೆ.

ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಾರಿಯ ಬಜೆಟ್‌ ಸುಮಾರು 4 ಲಕ್ಷ ಕೋಟಿ ರೂಗಳ ಬಜೆಟ್‌ ಅಗಿದ್ದು, ಕರ್ನಾಟಕದ ಸುಸ್ಥಿರ ಅಭಿವೃದ್ದಿ ಗುರಿಗಳನ್ನು ಸಾಧಿಸಲು ಈ ಬಜೆಟ್‌ ಅಂತಿಮ ನಿರ್ಣಯವಾಗಲಿದೆ ಎಂದು ಹೇಳಿದರು.

ರಾಜ್ಯಾದಾದ್ಯಾಂತ ಮೂಲ ಸೌಕರ್ಯ, ಶಿಕ್ಷಣ ಮತ್ತು ಆರೋಗ್ಯ ರಕ್ಷಣೆಯಲ್ಲಿನ ಹೂಡಿಕೆಗಳ ಸಮಾನ ಬೇಳವಣಿಗೆಯನ್ನು ಖಚಿತ ಪಡಿಸಿಕೊಳ್ಳಲು, ಪ್ರಾದೇಶಿಕ ಅಸಮಾನತೆಗಳನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸಲು ಈ ಬಜೆಟ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಆದರೆ, ಮೂಲ ಸೌಕರ್ಯ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕೆ ನಿಖರವಾದ ಯೋಜನೆ ಮತ್ತು ಸಮನ್ವಯದ ಅವಶಯಕತೆ ಇದೆ ಎಂದರು.

ಒಂದು ಟ್ರಿಲಿಯನ್‌ ಆರ್ಥಿಕ ರಾಜ್ಯಾವಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ದಿಟ್ಟ ಹೆಜ್ಜೆ ಇರಿಸಿದ್ದಾರೆ. ಸರ್ವಜನರ ಅಭಿವೃದ್ದಿಗಾಗಿ ಸಮ ಸಮಾಜ ನಿರ್ಮಾಣ ಮಾಡುವ ಹಿತದೃಷ್ಠಿಯಿಂದ ಈ ಬಜೆಟ್‌ ಅನ್ನು ಮಂಡಿಸಿದ್ದಾರೆ ಎಂದು ಹೊಗಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

9 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

11 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

11 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

11 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

12 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

12 hours ago