ರಾಜ್ಯ

ಉಡುಪಿಯಲ್ಲೊಂದು ಅಪರೂಪದ ಘಟನೆ : ಗ್ಯಾಸ್‌ ಓಟಿಪಿ ವ್ಯಕ್ತಿ ಜೀವ ಉಳಿಸಿದ್ದೇಗೆ?

ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ ಓಟಿಪಿ ಸಂದೇಶವೇ ಬದುಕಿಸಿದೆ.

ಉಡುಪಿಯ ಕೊಡವೂರು ವಾರ್ಡ್‌ನ ಕಂಬ್ಳಕಟ್ಟ ಎಂಬ ನಿರ್ಜನ ಪ್ರದೇಶದಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ಎಂಬುವವರು, ಅನಾರೋಗ್ಯದಿಂದ ಸುಧಾರಿಸಿಕೊಂಡ ಬಳಿಕ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಬಾವಿಯ ಪಂಪ್‌ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ಹೋದಾಗ ಹಗ್ಗ ತುಂಡಾಗಿ ಸುಮಾರು 15-20 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದರು.

ಬಾವಿಯಲ್ಲಿ ಪೈಪ್ ಹಿಡಿದುಕೊಂಡು ಮೂರು ದಿನಗಳ ಕಾಲ ಕುಳಿತಿದ್ದ ಶ್ರೀನಿವಾಸ್ ಅವರು ಬೊಬ್ಬೆ ಹೊಡೆದರೂ ಯಾರ ಗಮನಕ್ಕೂ ಬಂದಿರಲಿಲ್ಲ. ಆ ಸಮಯದಲ್ಲಿ ಅವರ ಗ್ಯಾಸ್ ಸಿಲಿಂಡರ್‌ಗೆ ಹೊಸ ಸಿಲಿಂಡರ್ ಬುಕ್ ಮಾಡಲು ಓಟಿಪಿ ಬಂದಿತ್ತು.

ಗ್ಯಾಸ್ ಏಜೆನ್ಸಿ ಸಿಬ್ಬಂದಿ ಗಣೇಶ್ ಅವರು ಸಿಲಿಂಡರ್ ತಲುಪಿಸಲು ಮನೆಗೆ ಬಂದಾಗ ವೃದ್ಧರು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿತು. ಸ್ಥಳೀಯರ ಸಹಾಯದಿಂದ ಹುಡುಕಾಡಿದಾಗ ಬಾವಿಯಲ್ಲಿ ಬಿದ್ದಿರುವುದು ಪತ್ತೆಯಾಯಿತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಾವಿಯಿಂದ ಮೇಲಕ್ಕೆ ಎತ್ತಿ ರಕ್ಷಿಸಿದರು.

ಸದ್ಯ ಶ್ರೀನಿವಾಸ್ ಆಚಾರ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನಲಾಗಿದೆ.

 

ಆಂದೋಲನ ಡೆಸ್ಕ್

Recent Posts

ನೀರಿಗಿಳಿಯುವ ಮುನ್ನ ಇರಲಿ ಎಚ್ಚರ !

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…

20 mins ago

ಸರಳ, ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…

25 mins ago

ಬಿಸಿಲಿಗೆ ಪರ್ಯಾಯ ಈಜುಕೊಳಗಳು

ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್‌ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…

31 mins ago

ಗ್ರಾಪಂ ಅಧಿಕಾರಿಗಳ ನಿಗಾಕ್ಕೆ ಜಿಪಿಎಸ್ ಸಿಸ್ಟಂ

ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…

34 mins ago

ಕೈ ಸುಡುತ್ತಿದೆ ಎಳನೀರು ಬೆಲೆ

ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…

40 mins ago

ಸಿದ್ದರಾಮಯ್ಯ ನಾಯಕತ್ವಕ್ಕೆ ಬಲ

ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…

43 mins ago