ಉಡುಪಿ: ತೋಟದ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವ ಹೋಗದಂತೆ ಹೋರಾಡಿದ 62 ವರ್ಷದ ವೃದ್ಧನನ್ನು ಗ್ಯಾಸ್ ಸಿಲಿಂಡರ್‌ನ ಓಟಿಪಿ ಸಂದೇಶವೇ ಬದುಕಿಸಿದೆ.
ಉಡುಪಿಯ ಕೊಡವೂರು ವಾರ್ಡ್‌ನ ಕಂಬ್ಳಕಟ್ಟ ಎಂಬ ನಿರ್ಜನ ಪ್ರದೇಶದಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಶ್ರೀನಿವಾಸ್ ಆಚಾರ್ಯ (62) ಎಂಬುವವರು, ಅನಾರೋಗ್ಯದಿಂದ ಸುಧಾರಿಸಿಕೊಂಡ ಬಳಿಕ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಬಾವಿಯ ಪಂಪ್‌ನಲ್ಲಿ ಕಸ ತುಂಬಿದ್ದರಿಂದ ಅದನ್ನು ಸ್ವಚ್ಛಗೊಳಿಸಲು ಹೋದಾಗ ಹಗ್ಗ ತುಂಡಾಗಿ ಸುಮಾರು 15-20 ಅಡಿ ಆಳದ ಬಾವಿಗೆ ಬಿದ್ದುಬಿಟ್ಟಿದ್ದರು.
ಬಾವಿಯಲ್ಲಿ ಪೈಪ್ ಹಿಡಿದುಕೊಂಡು ಮೂರು ದಿನಗಳ ಕಾಲ ಕುಳಿತಿದ್ದ ಶ್ರೀನಿವಾಸ್ ಅವರು ಬೊಬ್ಬೆ ಹೊಡೆದರೂ ಯಾರ ಗಮನಕ್ಕೂ ಬಂದಿರಲಿಲ್ಲ. ಆ ಸಮಯದಲ್ಲಿ ಅವರ ಗ್ಯಾಸ್ ಸಿಲಿಂಡರ್‌ಗೆ ಹೊಸ ಸಿಲಿಂಡರ್ ಬುಕ್ ಮಾಡಲು ಓಟಿಪಿ ಬಂದಿತ್ತು.
ಗ್ಯಾಸ್ ಏಜೆನ್ಸಿ ಸಿಬ್ಬಂದಿ ಗಣೇಶ್ ಅವರು ಸಿಲಿಂಡರ್ ತಲುಪಿಸಲು ಮನೆಗೆ ಬಂದಾಗ ವೃದ್ಧರು ನಾಪತ್ತೆಯಾಗಿರುವುದು ಗಮನಕ್ಕೆ ಬಂದಿತು. ಸ್ಥಳೀಯರ ಸಹಾಯದಿಂದ ಹುಡುಕಾಡಿದಾಗ ಬಾವಿಯಲ್ಲಿ ಬಿದ್ದಿರುವುದು ಪತ್ತೆಯಾಯಿತು. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಾವಿಯಿಂದ ಮೇಲಕ್ಕೆ ಎತ್ತಿ ರಕ್ಷಿಸಿದರು.
ಸದ್ಯ ಶ್ರೀನಿವಾಸ್ ಆಚಾರ್ಯ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂಪೂರ್ಣ ಗುಣಮುಖರಾಗಿದ್ದಾರೆ ಎನ್ನಲಾಗಿದೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…