ಹಾವೇರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಾಲೂಕು ಕಚೇರಿಯಲ್ಲಿ ಕಣ್ಣಿಗೆ ಬಿದ್ದ ಪುರಾತನ ಕತ್ತಿ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ.
ಗದಗದಲ್ಲಿ ನಡೆಯುತ್ತಿರುವ ಕನ್ನಡ ಸಂಭ್ರಮ ಕಾರ್ಯಕ್ರಮ ಹಿನ್ನೆಲೆ ತೆರಳಿದ್ದ ಅವರು, ಹಾವೇರಿಯ ರಾಣೆಬೆನ್ನೂರಿನ ಕಂದಾಯ ಇಲಾಖೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಲ್ಲಿದ್ದ ಪುರಾತನ ಕಾಲ ಕತ್ತಿ ನೋಡಿ ಆಶ್ಚರ್ಯಗೊಂಡ ಅವರು, ಕತ್ತಿ ಹಿಡಿದು ಪೋಸ್ ಕೊಟ್ಟಿದ್ದಾರೆ.
ಈ ಕುರಿತು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಣೆಬೆನ್ನೂರು ತಾಲೂಕು ಕಚೇರಿಯ ರೆಕಾರ್ಡ್ ರೂಂಗೆ ಭೇಟಿ ನೀಡಿದಾಗ ಅಪರೂಪದ ಸಂಗತಿಗಳು ಕಾಣಸಿಕ್ಕವು. 1842 ನೇ ಇಸವಿಯ ಮೂಲ ಭೂ ಸರ್ವೇ ರೇಖಾಚಿತ್ರ, ಭೂಕಂದಾಯ ಸಂಗ್ರಹಿಸಲು ಅಧಿಕಾರಿಗಳು ಬಳಸುತ್ತಿದ್ದ ಶತಮಾನದ ಕತ್ತಿ ಇಲ್ಲಿವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…
ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡಿದ್ದರು ಎಂಬ…
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…
ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…
ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…
ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…