ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಸಿದಂತೆ ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ವಿಚಾರದಲ್ಲಿ ಸಿದ್ದರಾಮಯ್ಯನವರ ಸಿಎಂ ಹುದ್ದೆ ಕುರ್ಚಿ ಅಲುಗಾಡುವುದಿಲ್ಲ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.5) ಸಿಬಿಐ ತನಿಖೆಗೆ ಕೋರಿ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಕೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನ ಎಲ್ಲಾ ಪ್ರಕ್ರಿಯೆಗೂ ನಾವು ತಲೆಬಾಗುತ್ತೇವೆ. ಹಾಗಾಗಿ ಸಿಬಿಐ ತನಿಖೆಗೆ ಕೋರಿ ಮೇಲ್ಮನವಿ ಅರ್ಜಿ ಸಲ್ಲಿಸಿರುವುದನ್ನು ಸ್ವಾಗತಿಸುತ್ತೇವೆ ಎಂದರು.
ಇನ್ನು ಈ ವಿಚಾರದ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇಲ್ಲ. ಅಲ್ಲದೇ ಸಿಎಂ ಹುದ್ದೆಯ ಕುರ್ಚಿಯೂ ಅಲುಗಾಡುವುದಿಲ್ಲ. ಹೀಗಾಗಿ ನಾವು ಮುಡಾ ಪ್ರಕರಣದಲ್ಲಿ ಕಾನೂನು ಹೋರಾಟ ಮಾಡಲಿದ್ದು, ನ್ಯಾಯಾಲಯ ಏನೇ ತೀರ್ಪು ನೀಡದರೂ ಸ್ವೀಕರಿಸಲು ಸಿದ್ಧರಿದ್ದೇವೆ ಎಂದು ಹೇಳಿದರು.





