madhu bangarappa
ಬೆಂಗಳೂರು: ಕ್ಯಾನ್ಸರ್‌ನಿಂದ ಸಂಕಷ್ಟಕ್ಕೊಳಗಾದ ವಿದ್ಯಾರ್ಥಿಗಳಿಗೆ ಚಿಕಿತ್ಸೆಯ ಜೊತೆಗೆ ಓದಿಗೂ ಅವಕಾಶವಾಗುವಂತೆ ನಗರದ ಕಿದ್ವಾಯಿ ಆಸ್ಪತ್ರೆಯ ಬಳಿ ವಸತಿ ಸಹಿತ ಶಾಲೆ ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 3,500 ಮಕ್ಕಳು ಕ್ಯಾನ್ಸರ್‌ನಿಂದ ಬಾಧಿತರಾಗಿದ್ದು, ಅವರು ಕಲಿಕೆಯಲ್ಲಿ ವಂಚಿತರಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಕ್ಯಾನ್ಸರ್ ಗುಣಮುಖವಾಗುವ ಆರೋಗ್ಯ ಸಮಸ್ಯೆ. ರೋಗ ಬಂದಾಕ್ಷಣ ಬಹಳಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಕ್ಯಾನ್ಸರ್ ಕಾರಣಕ್ಕಾಗಿ ಅವರಿಗೆ ಶಿಕ್ಷಣ ಕೈಗೆಟಕುದಂತಿರಬಾರದು ಎಂದು ಹೇಳಿದರು.
ಕಿದ್ವಾಯಿ ಬಳಿ ಜಾಗ ಹುಡುಕಲು ಈಗಾಗಲೇ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದ್ದೇವೆ. ನಮ್ಮ ಇಲಾಖೆಗೆ 3 ಎಕರೆಯಷ್ಟು ಜಾಗ ಸಿಕ್ಕರೆ ಇದೇ ವರ್ಷದ ಜುಲೈನಿಂದಲೇ ಶಾಲೆ ಆರಂಭಿಸುವ ಉಮೇದಿನಲ್ಲಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಮಕ್ಕಳಿಗೆ ಓದಲು ಅನುಕೂಲವಾಗುವಂತೆ ಶಾಲೆ, ಅದರ ಪಕ್ಕದಲ್ಲೇ ಹಾಸ್ಟೆಲ್, 5 ರಿಂದ 6 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ಪೋಷಕರಿರಬೇಕಾಗುತ್ತದೆ. ಅದಕ್ಕಾಗಿ ಪ್ರತ್ಯೇಕ ಕಟ್ಟಡ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಈ ಶಾಲೆಯಲ್ಲಿ ಒದಗಿಸಲಾಗುವುದು. ಜೊತೆಗೆ ಆಸ್ಪತ್ರೆಗೆ ಮತ್ತು ಶಾಲೆಗೆ ಮಿನಿ ಬಸ್‍ನಂತಹ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…