ರಾಜ್ಯ

ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು : ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ.

ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಆಗಸ್ಟ್ 17 ರ ಭಾನುವಾರ ಹೋಟೆಲ್ ಲಲಿತ್ ಅಶೋಕ್‌ನಲ್ಲಿ ಅಂತಾರಾಷ್ಟ್ರೀಯ ವಿದೇಶದಲ್ಲಿ ಅಧ್ಯಯನ ಮೇಳ – 2025 ಅನ್ನು ಆಯೋಜಿಸಿದೆ. ಈ ವಿಶೇಷ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದೆ.

ಈ ಸಂಸ್ಥೆಗಳು ವಿಶ್ವದ ಟಾಪ್ 500 ರಲ್ಲಿ ಸ್ಥಾನ ಪಡೆದಿವೆ. ಈ ಕುರಿತು ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಆರ್‌. ಪಾಟೀಲ್ ಹೆಚ್ಚಿನ ಮಾಹಿತಿ ನೀಡಿದರು. “ಸಮಾಜದ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡುವ ಅವಕಾಶವನ್ನು ಒದಗಿಸಲಾಗುವುದು. ಇದೇ ಮೊದಲ ಬಾರಿಗೆ ಈ ರೀತಿಯ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರಲಾಗುತ್ತಿದೆ” ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಇದು “ಜಾಗತಿಕ ಶಿಕ್ಷಣದ ಹೆಬ್ಬಾಗಿಲು” ಎಂದು ಸಚಿವರು ತಿಳಿಸಿದರು. ವಿದ್ಯಾರ್ಥಿಗಳು ವಿದೇಶದಲ್ಲಿ ವ್ಯಾಸಂಗ ಮಾಡಲು ಭಾರತದಿಂದ ತೆರಳಿದ ನಂತರ ಅವರಿಗೆ ಎಲ್ಲ ರೀತಿಯ ಬೆಂಬಲ ಒದಗಿಸುವುದು ನಮ್ಮ ಗುರಿಯಾಗಿದೆ.

ಈ ಸರ್ಕಾರಿ ಬೆಂಬಲಿತ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಹೆಚ್ಚು ಆಪ್ತವಾಗಿರಲಿದೆ. ಶೈಕ್ಷಣಿಕ ಪ್ರಗತಿ ಮತ್ತು ಕಾನೂನು ನೆರವು ಎಲ್ಲವೂ ದೊರೆಯಲಿದೆ ಎಂದು ಸಚಿವರು ವಿವರಿಸಿದರು. ಈ ಎಕ್ಸ್‌ಪೋದಲ್ಲಿ ಹೆಚ್ಚು ವಿಶ್ವಾಸಾರ್ಹತೆ ಮತ್ತು ಪಾರದರ್ಶಕತೆ ನೀಡುತ್ತದೆ.

ವಿಶ್ವವಿದ್ಯಾಲಯದ ಆಯ್ಕೆ, ಏಜೆನ್ಸಿ ಶುಲ್ಕವಿಲ್ಲದೆ ಉಚಿತ ಮಾರ್ಗದರ್ಶನವನ್ನು ನಾವು ನೀಡುತ್ತೇವೆ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು. ಎಕ್ಸ್‌ಪೋದ ಪ್ರಮುಖ ಅಂಶಗಳು ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್‌; ಸ್ಪಾಟ್ ವಿದ್ಯಾರ್ಥಿವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು; ವೀಸಾ ಪ್ರಕ್ರಿಯೆ, ಹಣಕಾಸು ಯೋಜನೆ, ಆರೋಗ್ಯ ವಿಮೆ, ಭಾಷಾ ಪ್ರಾವೀಣ್ಯತೆ ಮತ್ತು ಇತರೆ ಮಾರ್ಗದರ್ಶನ. ಆಸ್ಟ್ರೇಲಿಯಾ, ಯುನೈಟೆಡ್‌ ಕಿಂಗ್‌ಡಮ್‌, ಅಮೆರಿಕ, ಐರ್ಲೆಂಡ್, ನ್ಯೂಜಿಲೆಂಡ್ ಮತ್ತು ಮಧ್ಯಪ್ರಾಚ್ಯ ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಇರಲಿದ್ದಾರೆ.

ಎಕ್ಸ್‌ಪೋದಲ್ಲಿ ಭಾಗವಹಿಸಲು http://studyabroad.ksdckarnataka.com ನಲ್ಲಿ ನೋಂದಾಯಿಸಿಕೊಳ್ಳಬಹುದು ಪ್ರಮುಖ ವಿಶ್ವವಿದ್ಯಾಲಯಗಳು ಮತ್ತು ಕೊಡುಗೆಗಳು – ಬ್ಯಾಂಗೋರ್ ವಿಶ್ವವಿದ್ಯಾಲಯ (ಯುಕೆ): ₹3–5 ಲಕ್ಷದವರೆಗಿನ ವಿದ್ಯಾರ್ಥಿವೇತನ, ಒಂದು ಆರ್ಥಿಕ ದರ್ಜೆಯ ವಿಮಾನ ಟಿಕೆಟ್, ಜೊತೆಗೆ ಎರಡು 50% ಬೋಧನಾ ಶುಲ್ಕ ವಿದ್ಯಾರ್ಥಿವೇತನಗಳು – ಉತ್ತರ ಟೆಕ್ಸಾಸ್ ವಿಶ್ವವಿದ್ಯಾಲಯ (ಅಮೆರಿಕ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಜೇಮ್ಸ್ ಕುಕ್ ವಿಶ್ವವಿದ್ಯಾಲಯ (ಆಸ್ಟ್ರೇಲಿಯಾ): ₹8–10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಕರ್ಟಿನ್ ವಿಶ್ವವಿದ್ಯಾಲಯ (ಸಿಂಗಾಪುರ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – ಮುರ್ಡೋಕ್ ದುಬೈ (ಅಮೆರಿಕ): ₹5 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು – GISMA ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯ (ಜರ್ಮನಿ): ₹10 ಲಕ್ಷದವರೆಗಿನ ವಿದ್ಯಾರ್ಥಿವೇತನಗಳು

ಆಂದೋಲನ ಡೆಸ್ಕ್

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

17 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

18 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

18 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

18 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

19 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

22 hours ago