ರಾಜ್ಯ

ಹುಕ್ಕಾ ಬಾರ್‌ ನಿಯಂತ್ರಣಕ್ಕೆ ಶಿಘ್ರವೇ ಬರಲಿದೆ ವಿಶೇಷ ಕಾನೂನು

ಬೆಳಗಾವಿ : ಹುಕ್ಕಾ ಬಾರ್ ಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಶೀಘ್ರದಲ್ಲಿಯೇ ವಿಶೇಷ ಕಾನೂನು ರೂಪಿಸಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಅವರು ಹುಕ್ಕಾ ಬಾರ್‌ ಗಳು ಜನರ ಮೇಲೆ ಅದರಲ್ಲೂ ವಿಶೇಷವಾಗಿ ಯುವಕರ ಮೇಲೆ ಪರಿಣಾಮ ಬೀರುತ್ತಿವೆ. ಆದರೆ ಅವರ ಬಗ್ಗೆ ಏನೂ ಮಾತನಾಡಲು ಸಾಧ್ಯವಾಗಿಲ್ಲ ಎಂದಿದ್ದಾರೆ.

ಇದೇ ವೇಳೆ ಮಾತನಾಡಿದ ರಾಮಮೂರ್ತಿಯವರು ಬೃಹತ್‌ ಬೆಂಗಳೂರು ಮಹಾನಗರದ ವ್ಯಾಪ್ತಿಯಲ್ಲಿ ಹುಕ್ಕಾ ಬಾರ್‌ ಗಳು ನಾಯಿ ಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಅವರಿಗೆ ಯಾರು ಪರವಾನಗಿ ಕೊಟ್ಟಿದ್ದಾರೆ ಹೇಗೆ ಪಡೆದುಕೊಂಡಿದ್ದಾರೆ ಎಂಬುದು ನಮಗೆ ತಿಳಿಯುತ್ತಿಲ್ಲ ಎಂದು ಹೇಳಿದ್ದಾರೆ.

ಇತ್ತೀಚೆಗೆ ಹುಕ್ಕಾ ಬಾರ್‌ ನಲ್ಲಿ ಸಿಲಿಂಡರ್‌ ಸ್ಪೋಟಗೊಂಡ ಘಟನೆಯನ್ನೂ ಕೂಡ ಅವರು ಪ್ರಸ್ಥಾಪ ಮಾಡಿದ್ದಾರೆ. ಇದ್ದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ್‌ ಅವರು ಇದರ ಬಗ್ಗೆ ನನಗೆ ಮಾಹಿತಿ ಇದೆ. ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಸರ್ಕಾರ ಕಾನೂನು ಕ್ರಮ ತರಲಿದೆ ಎಂದು ಹೇಳಿದ್ದಾರೆ. ಇದಕ್ಕೆ ದನಿಗೂಡಿಸಿದ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ನಗರದಲ್ಲಿ ಹುಕ್ಕಾ ಬಾರ್‌ ಗಳು ಮಾರಕವಾಗುತ್ತಿವೆ. ಪಂಜಾಬ್‌ ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್‌ಘಡ, ತಮಿಳುನಾಡು ಹಾಗೂ ಗುಜರಾತ್‌ ಸೇರಿದಂತೆ ಹತ್ತು ರಾಜ್ಯಗಳು ಹುಕ್ಕಾ ಬಾರ್‌ ಗಳನ್ನು ನಿಷೇಧ ಮಾಡಿವೆ. ನಮ್ಮಲ್ಲಿಯೂ ಕೂಡ ಅದೇ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದ್ದಾರೆ.

lokesh

Recent Posts

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

22 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

3 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago