Mysore
26
light rain

Social Media

ಮಂಗಳವಾರ, 08 ಅಕ್ಟೋಬರ್ 2024
Light
Dark

ತಾಯಂದಿರ ಬಗ್ಗೆ ಹೇಳಿಕೆ; ಹೆಚ್.ಡಿ.ಕುಮಾರಸ್ವಾಮಿ ವಿಷಾದ !

  • ಮಹಿಳೆಯರಿಗೆ ಕಾಂಗ್ರೆಸ್ ಎಸಗಿದ ಅಪಮಾನಗಳ ಕಂತೆ ಕಂತೆ ಪಟ್ಟಿ ಕೊಟ್ಟ ಮಾಜಿ ಮುಖ್ಯಮಂತ್ರ

ಬೆಂಗಳೂರು: ನನ್ನ ಹೇಳಿಕೆಯಿಂದ ತಾಯಂದಿರಿಗೆ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮಹಿಳೆಯರನ್ನು ಅಪಮಾನಿಸಿಲ್ಲ, ಅಂತಹ ಜಾಯಮಾನವೂ ನನ್ನದಲ್ಲ. ವಿಷಾದಿಸುವುದಕ್ಕೆ ನನಗೆ ಯಾವ ಪ್ರತಿಷ್ಠೆಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು; ನಾಡಿನ ಜನರನ್ನು ಮರಳು ಮಾಡುತ್ತಿರುವ ಐದು ಗ್ಯಾರಂಟಿಗಳ ವಿರುದ್ಧ ಕಿಡಿಕಾರಿದರು.

ಅಳಬೇಡಪ್ಪ ಡಿ.ಕೆ.ಶಿವಕುಮಾರ್. ನಾನೇನು ವಿಷಾದ ವ್ಯಕ್ತಪಡಿಸುತ್ತೇನೆ. ನೀನು ದುಃಖ ಪಡಬೇಡಪ್ಪ. ನೀನು ಏನ್ ದುಃಖ ಪಟ್ಟಿದ್ದೀಯಾ ಎನ್ನುವುದನ್ನು ನೋಡಿದ್ದೇನೆ ಎಂದು ನೇರ ಡಿಕೆಶಿಯನ್ನು ತರಾಟೆಗೆ ತೆಗೆದುಕೊಂಡರು ಕುಮಾರಸ್ವಾಮಿ ಅವರು.

ಕಾಂಗ್ರೆಸ್ ಮಹಿಳಾ ನಾಯಕಿಯರಿಗೆ ದುಃಖ ಆಗಿದ್ದರೆ ಅದಕ್ಕೂ ವಿಷಾದ ವ್ಯಕ್ತಪಡಿಸುತ್ತೇನೆ. ಯಾರಿಗೇ ದುಃಖ ಆಗಿದ್ದರೂ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ ನಾನು ಇವರಂತೆ ಕೆನ್ನೆ ನೆಕ್ಕೋದು, ಹೆಣ್ಣು ಮಕ್ಕಳಿಗೆ ರೇಟ್ ಫಿಕ್ಸ್ ಮಾಡಿದ ರೀತಿ ನಾನು ಮಾತನಾಡಿಲ್ಲ. ನಾನು ತಪ್ಪು ಮಾಡಿಲ್ಲ. ಜನರಿಗೇ ನನ್ನ ಹೇಳಿಕೆಯನ್ನು ಬಿಡುತ್ತೇನೆ. ಅವರೇ ತೀರ್ಮಾನ ಮಾಡಲಿ ಎಂದು ಹೇಳಿದರು ಅವರು.

ತಮ್ಮ ಹೇಳಿಕೆಯ ಮಾಧ್ಯಮ ವರದಿಗಳನ್ನು ಮಾಧ್ಯಮಗೋಷ್ಠಿಯಲ್ಲಿ ಓದಿದ ಕುಮಾರಸ್ವಾಮಿ ಅವರು; ಜನರಿಂದ ಕಿತ್ತುಕೊಂಡ ಹಣವನ್ನೇ ಕಾಂಗ್ರೆಸ್ಸಿನವರು ಗ್ಯಾರಂಟಿ ಎಂದು ಕೊಡುತ್ತಿದೆ. ಈ ಐದು ಗ್ಯಾರಂಟಿಗಳು ‘ಪಿಕ್ ಪಾಕೆಟ್ ಗ್ಯಾರಂಟಿಗಳು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಮಕೂರು ಲೋಕಸಭೆ ಕ್ಷೇತ್ರದ ತುರುವೇಕೆರೆಯಲ್ಲಿ ನಾನು ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದೆ‌. ಆ ಸಭೆಯಲ್ಲಿ ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡಿದ್ದೆ. ಕುಮಾರಸ್ವಾಮಿ ತಾಯಂದಿರಿಗೆ ಅಪಮಾನ ಮಾಡಿದ್ದಾರೆ. ಅವರು ಕ್ಷಮೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ. ವಾಯುವೆಗದಲ್ಲಿ ತಮ್ಮ ಶಾಸಕರು, ಮಾಜಿ ಶಾಸಕರು, ಮಹಿಳಾ ಘಟಕದವರ ಜತೆ ಝೂಮ್ ಮೀಟಿಂಗ್ ಮಾಡಿದ್ದಾರೆ. ಇಂದಿರಾ ಗಾಂಧಿ ಅವರು ಹತ್ಯೆಯಾದ ಸಮಯದಲ್ಲಿ ದುಃಖಪಟ್ಟಿದ್ದು ಬಿಟ್ಟರೆ ಅಷ್ಟು ದುಃಖಪಟ್ಟಿದ್ದು ಈ ದಿನವೇ ಎಂದು ಅವರು ಹೇಳಿಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು.

ಹೆಣ್ಣು ಮಕ್ಕಳನ್ನು ಕಿಡ್ನಾಪ್ ಮಾಡಿ ಬೇಲಿ ಹಾಕಿದಾಗ ದುಃಖ ಆಗಲಿಲ್ಲವೇ? : ತಾಯಂದಿರ ಕಣ್ಣೀರು ಈ ವ್ಯಕ್ತಿಗೆ ಈಗ ಕಾಣುತ್ತಿದೆಯಾ? ನಾನು ಡಿ.ಕೆ.ಶಿವಕುಮಾರ್ ಗೆ ಕೇಳಲು ಬಯಸುತ್ತೇನೆ. ಕೆಲ ಹೆಣ್ಣು ಮಕ್ಕಳನ್ನು ಅಪಹರಣ (ಕಿಡ್ನಾಪ್) ಮಾಡಿ ಅವರ ಅಪ್ಪ ಅಮ್ಮನಿಂದ ಜಮೀನು ಬರೆಸಿಕೊಂಡಾಗ ನಿಮಗೆ ದುಃಖ ಆಗಲಿಲ್ಲವೇ.. ಪಾಪ.. ಇದೆಲ್ಲವನ್ನು ನಾನು ಕಂಡಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನೇರ ವಾಗ್ದಾಳಿ ನಡೆಸಿದರು.

 

Tags: