Mysore
32
scattered clouds

Social Media

ಶನಿವಾರ, 25 ಏಪ್ರಿಲ 2026
Light
Dark

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ ಸಿದ್ದರಾಮಯ್ಯ

ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಕಾರವಾರದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗೆ ಕೊನೆಗೆ ಸಿಎಂ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸಿದ್ದಾರೆ. ಕಾರವಾರದಲ್ಲಿ ಮುಂದಿನ ಆಯವ್ಯಯದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.

ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇನ್ನು ಜಿಲ್ಲೆಯಲ್ಲೇ ಉನ್ನತ ಮಟ್ಟದ ಚಿಕಿತ್ಸೆ ಸಿಗುವಂತಾಗಲು ಕಾರವಾರದಲ್ಲಿ ಪ್ರತ್ಯೇಕ ಕ್ಯಾನ್ಸಲ್‌ ಯೂನಿಟ್‌ ಒಂದನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

Tags:
error: Content is protected !!