ಕಾರವಾರ: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಡ ಹಾಗೂ ಸಾಮಾನ್ಯ ಜನರಿಗೆ ಕೈಗೆಟಕುವ ದರದಲ್ಲಿ ವೈದ್ಯಕೀಯ ಸೌಲಭ್ಯ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಾರವಾರದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗೆ ಕೊನೆಗೆ ಸಿಎಂ ಸಿದ್ದರಾಮಯ್ಯನವರು ಹಸಿರು ನಿಶಾನೆ ತೋರಿಸಿದ್ದಾರೆ. ಕಾರವಾರದಲ್ಲಿ ಮುಂದಿನ ಆಯವ್ಯಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ.
ಪ್ರತಿ ಜಿಲ್ಲೆಯಲ್ಲಿಯೂ ಬಡವರಿಗಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ.
ಇನ್ನು ಜಿಲ್ಲೆಯಲ್ಲೇ ಉನ್ನತ ಮಟ್ಟದ ಚಿಕಿತ್ಸೆ ಸಿಗುವಂತಾಗಲು ಕಾರವಾರದಲ್ಲಿ ಪ್ರತ್ಯೇಕ ಕ್ಯಾನ್ಸಲ್ ಯೂನಿಟ್ ಒಂದನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…