ರಾಜ್ಯ

ಸರ್ಕಾರಿ, ಅನುದಾನಿತ ಶಾಲೆಗಳಿಗೆ ಒಟ್ಟು 18 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದೆ. ಈ ನಿಟ್ಟಿನಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 900 ಕೆಪಿಎಸ್‌ ಶಾಲೆ ಆರಂಭ ಮಾಡಲು ಮಂಜೂರಾತಿ ನೀಡಲಾಗಿದೆ. ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಲಾಗಿದ್ದು, ಅಗತ್ಯವಿರುವ ಕಡೆ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಉಚಿತ ವಿದ್ಯುತ್‌ ನೀಡಲಾಗುತ್ತಿದೆ. ವಿಶೇಷ ತರಗತಿಗಳನ್ನು ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಗಮನಹರಿಸಲಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

3 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

4 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

5 hours ago

ಹುಲಿ ದಾಳಿಗೆ ಹಸು ಬಲಿ ; ರೈತ ಪಾರು

ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…

5 hours ago

ಎಲ್‌ಪಿಜಿ ಕೊರತೆ | ಕೇಂದ್ರದಿಂದ 1955ರ ಕಾಯ್ದೆ ಜಾರಿ ; ಏನಿದು ಅಗತ್ಯ ಸರಕು ಕಾಯ್ದೆ?

ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…

5 hours ago

ನ್ಯಾಯಾಂಗ ಭ್ರಷ್ಟಾಚಾರ ಕುರಿತ ಅಧ್ಯಾಯ ವಿವಾದ ; ಸಾರ್ವಜನಿಕ ಕ್ಷಮೆ ಯಾಚಿಸಿದ ಎನ್‌ಸಿಇಆರ್‌ಟಿ

ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…

5 hours ago