Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಜನತೆಗೆ ಮತ್ತೊಂದು ಗುಡ್‌ನ್ಯೂಸ್‌ ಕೊಟ್ಟ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಜನತೆಗೆ ಗುಡ್‌ನ್ಯೂಸ್‌ ಕೊಟ್ಟಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಇನ್ನು ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಕೆ ಕಾಲದಲ್ಲಿ ಮಂಗನ ಕಾಯಿಲೆ ತೀವ್ರವಾಗಿ ಉಲ್ಬಣಗೊಳ್ಳುತ್ತದೆ.

ಈ ಬಾರಿ ಆರಂಭದಲ್ಲೇ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಮುಂಜಾಗ್ರತ ಕ್ರಮವಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರೂ ಕಡ್ಡಾಯವಾಗಿ ಟೆಸ್ಟಿಂಗ್‌ ಮಾಡಿ ಚಿಕಿತ್ಸೆ ಆರಂಭಿಸಬೇಕು. ಇದರಿಂದ ಆರಂಭದಲ್ಲಿಯೇ ಕೆಎಫ್‌ಡಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದರು.

ಈ ಮೂಲಕ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

 

 

Tags: