ಬೆಂಗಳೂರು: ಮಂಗನ ಕಾಯಿಲೆಗೆ 2026ರ ವೇಳೆಗೆ ಲಸಿಕೆ ಲಭ್ಯವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜನತೆಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಎಫ್‌ಡಿ ಲಸಿಕೆ 2026ಕ್ಕೆ ಲಭ್ಯವಾಗಲಿದೆ. ಆದರೆ ಅಲ್ಲಿಯವರೆಗೂ ಮಂಗನ ಕಾಯಿಲೆಯನ್ನು ಹತೋಟಿಯಲ್ಲಿಟ್ಟುಕೊಂಡು ಯಾವುದೇ ಸಾವುಗಳಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಇನ್ನು ಪ್ರತಿ ವರ್ಷ ಜನವರಿ ತಿಂಗಳಿನಿಂದ ಆರಂಭವಾಗಿ ಬೇಸಿಕೆ ಕಾಲದಲ್ಲಿ ಮಂಗನ ಕಾಯಿಲೆ ತೀವ್ರವಾಗಿ ಉಲ್ಬಣಗೊಳ್ಳುತ್ತದೆ.
ಈ ಬಾರಿ ಆರಂಭದಲ್ಲೇ ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚು ಗಮನ ಹರಿಸಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಮುಂಜಾಗ್ರತ ಕ್ರಮವಾಗಿ ಮಂಗನ ಕಾಯಿಲೆ ಇರುವ ಪ್ರದೇಶಗಳಲ್ಲಿ ಯಾರಿಗೆ ಜ್ವರ ಬಂದರೂ ಕಡ್ಡಾಯವಾಗಿ ಟೆಸ್ಟಿಂಗ್ ಮಾಡಿ ಚಿಕಿತ್ಸೆ ಆರಂಭಿಸಬೇಕು. ಇದರಿಂದ ಆರಂಭದಲ್ಲಿಯೇ ಕೆಎಫ್‌ಡಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದು ಎಂದರು.
ಈ ಮೂಲಕ ಮಂಗನ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…