ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ ಐತಿಹಾಸಿಕ ಅರ್ಧನಾರೇಶ್ವರ ದೇವಸ್ಥಾನ ಪತ್ತೆಯಾಗಿದ್ದು, ಪುರಾತತ್ವ ವಲಯದಲ್ಲಿ ಸಂಚಲನ ಮೂಡಿಸಿದೆ.
ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ ಎನ್ನಲಾಗಿದೆ.
ಮೇಲ್ನೋಟಕ್ಕೆ ಸಾಮಾನ್ಯ ಮನೆ ಎನಿಸಿದರೂ, ಒಳಗೆ ಪ್ರವೇಶಿಸಿದರೆ ಸುಮಾರು ಹತ್ತು ಅಡಿ ಮಣ್ಣಿನಡಿಯಲ್ಲಿ ಹುದುಗಿದ್ದ ಚಾಲುಕ್ಯರ ಕಾಲದ ಪುರಾತನ ದೇವಾಲಯ ಪತ್ತೆಯಾಗಿದ್ದು ಇದು ನಾಲ್ಕನೇ ಶತಮಾನದ ಶಿವನ ಮೂರ್ತಿಯಾಗಿದೆ.
ಇತಿಹಾಸಕಾರರ ಪ್ರಕಾರ, ಇದು 10-11ನೇ ಶತಮಾನದ ಚಾಲುಕ್ಯರ ಕಾಲದ ಈಶ್ವರ ದೇವಸ್ಥಾನವಾಗಿದ್ದು, ವಾಸ್ತುಶಿಲ್ಪ ಹಾಗೂ ಶಿಲ್ಪಕಲೆ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ದೇವಸ್ಥಾನದ ಗರ್ಭಗುಡಿ, ಶಿಲ್ಪ ಕೆತ್ತನೆಗಳು ಹಾಗೂ ವಾಸ್ತು ವಿನ್ಯಾಸಗಳು ಪ್ರಾಚೀನ ಪರಂಪರೆಯನ್ನು ಪ್ರತಿಬಿಂಬಿಸುತ್ತಿವೆ.
ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಪುರಾತತ್ವ ಇಲಾಖೆ ದೇವಸ್ಥಾನವನ್ನು ವಶಕ್ಕೆ ಪಡೆದು ಜೀರ್ಣೋದ್ಧಾರ ಮಾಡುವ ಯೋಜನೆ ರೂಪಿಸುತ್ತಿದೆ. ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಶೀಘ್ರದಲ್ಲೇ ಸಂರಕ್ಷಣಾ ಕಾರ್ಯ ಆರಂಭಿಸುವ ಭರವಸೆ ನೀಡಿದ್ದಾರೆ.
ಆದರೆ, ಚೌಕಿಮಠ ಕುಟುಂಬದ ಶರಣಯ್ಯ ಹಾಗೂ ಶೇಖರಯ್ಯ ಚೌಕಿಮಠ ಅವರು ಸ್ಪಷ್ಟಪಡಿಸಿರುವಂತೆ ಇಲ್ಲಿ ವಾಸಿಸುವವರೆಲ್ಲರೂ ಬಡ ಕುಟುಂಬಗಳು. ಸರ್ಕಾರ ಸೂಕ್ತ ಪರಿಹಾರ ನೀಡಿದರೆ ಮಾತ್ರ ಮನೆ ಬಿಟ್ಟು ಕೊಡಲು ಸಿದ್ಧ ಎಂದಿದ್ದಾರೆ.
ಪ್ರಸ್ತುತ ಈ ಆವರಣದಲ್ಲಿ ಶರಣಯ್ಯ ಚೌಕಿಮಠ, ಶೇಖರಯ್ಯ ಚೌಕಿಮಠ, ಬಸವ್ವ ಈರಯ್ಯ ಚೌಕಿಮಠ, ಕೊಟ್ರಯ್ಯ ಚೌಕಿಮಠ ಹಾಗೂ ಈರಮ ಶಂಕ್ರಯ್ಯ ಚೌಕಿಮಠ ಕುಟುಂಬಗಳು ವಾಸಿಸುತ್ತಿವೆ.
ಇತಿಹಾಸ ಮತ್ತು ಜನಜೀವನದ ನಡುವಿನ ಈ ಮಹತ್ವದ ಪ್ರಕರಣದಲ್ಲಿ ಮುಂದಿನ ನಿರ್ಧಾರ ಸರ್ಕಾರದ ಕೈಯಲ್ಲಿದ್ದು, ಲಕ್ಕುಂಡಿ ಗ್ರಾಮ ಮತ್ತೊಮೆ ಐತಿಹಾಸಿಕ ಕೇಂದ್ರಬಿಂದುವಾಗಿ ಹೊರಹೊಮ್ಮುವ ಸಾಧ್ಯತೆ ದಟ್ಟವಾಗಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…