ಬೆಂಗಳೂರು: ಕೋರಮಂಗಲದ ಖಾಸಗಿ ಹೋಟೆಲ್ ಟೆರೆಸ್ ಮೇಲೆ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರವ ಘಟನೆ ನಡೆದಿದೆ.
ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್ ಬಳಿಯಿರುವ ಖಾಸಗಿ ಹೋಟೆಲ್‌ನ ಟೆರೆಸ್ ಮೇಲೆ ನಾಲ್ವರು ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆ ಮಹಿಳೆಯಿಂದ ಮೊಬೈಲ್ ಫೋನ್ ಹಾಗೂ ಪರ್ಸ್ ಕಿತ್ತುಕೊಂಡಿರುವ ಘಟನೆ ತಿಳಿದು ಬಂದಿದೆ.
ಈ ಕುರಿತು ಸಂತ್ರಸ್ಥ ಮಹಿಳೆಯೂ ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಪೋಲಿಸರಿಗೆ ದೂರು ನೀಡಿದ್ದಾರೆ. ಈ ದೂರಿನ ಪ್ರಕರಣವನ್ನು ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಂತ್ರಸ್ಥ ಮಹಿಳೆಯೂ ಖಾಸಗಿ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ಸಂತ್ರಸ್ಥೆ ನೀಡಿದ ದೂರಿನ ಆಧಾದ ಮೇಲೆ ತನಿಖೆ ನಡೆಸಿರುವ ಕೋರಮಂಗಲ ಪೊಲೀಸರು ಆರೋಪಿಗಳಾದ ಅಜಿತ್, ಶಿವು ಸೇರಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಅಲ್ಲದೇ ಮತ್ತೊಬ್ಬ ಆರೋಪಿಗೆ ಹುಡುಕಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.





