ಶಿವಮೊಗ್ಗ: ಹಣವನ್ನು ಡಬಲ್ ಮಾಡುತ್ತದೆ ಎಂದು ನಂಬಿ ಆನ್ಲೈನ್ ಅಪ್ಲಿಕೇಷನ್ಗೆ ಹಣ ಹೂಡಿಕೆ ಮಾಡಿ ಮೋಸ ಹೋದ ಯುವನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭದ್ರಾವತಿ ನಗರದ ಪೇಪರ್ ಲೇಔಟ್ನ 27 ವರ್ಷದ ಪ್ರದೀಪ್ ನೇಣಿಗೆ ಶರಣಾದ ಯುವಕನಾಗಿದ್ದಾನೆ.
ಮಾಚೇನಹಳ್ಳಿಯ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ, ಆನ್ಲೈನ್ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ಡಬಲ್ ಆಗುತ್ತದೆ ಎಂದು ನಂಬಿ ಹಲವು ಕಡೆಗಳಲ್ಲಿ ಸಾಲ ಮಾಡಿ ಸುಮಾರು 90 ಸಾವಿರ ರೂ.ಗಳನ್ನು ಖಾಸಗಿ ಆಪ್ನಲ್ಲಿ ಹೂಡಿಕೆ ಮಾಡಿದ್ದನು.
ಆದರೆ ಹಣ ವಾಪಸ್ ಸಿಗದೇ ಮನನೊಂದ ಪ್ರದೀಪ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಪೇಪರ್ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…