ರಾಜ್ಯ

ಭ್ರಷ್ಟಾಚಾರದಲ್ಲಿ ಮುಳುಗಿದ್ದ ಆಪ್‌ ಪಕ್ಷ ದೆಹಲಿಯಿಂದ ಮುಕ್ತ: ಆರ್.ಅಶೋಕ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆರಂಭದಲ್ಲಿ ಸರಳವಾದ ಕಾರಿನಲ್ಲಿ ಸಂಚರಿಸುತ್ತಿದ್ದ ಅರವಿಂದ ಕೇಜ್ರಿವಾಲ್‌ ಈಗ ದೊಡ್ಡ ಅರಮನೆ ಕಟ್ಟಿಕೊಂಡು ಐಷಾರಾಮಿ ಕಾರಿನಲ್ಲಿ ಸಂಚರಿಸುತ್ತಿದ್ದಾರೆ. ಅವರ ಆಡಳಿತ ನೋಡಿ ಜನರು ಬೇಸತ್ತಿದ್ದಾರೆ. ಯಮುನಾ ನದಿಯ ಬಗ್ಗೆ ಅವರು ಆಡಿದ ಮಾತು ಜನರಲ್ಲಿ ಬೇಸರ ತಂದಿದೆ. ಜನರು ಪ್ರತಿ ದಿನ ಕುಡಿಯುವ ನೀರಿನ ಬಗ್ಗೆ ಆಪಾದನೆ ಮಾಡಿದ್ದರು ಎಂದರು.

ಯಮುನಾ ನದಿಯನ್ನು ಸರ್ಕಾರ ಸ್ವಚ್ಛವಾಗಿ ಇಡಬೇಕಿತ್ತು. ಅದನ್ನು ಬಿಟ್ಟು ನದಿಯ ಮೇಲೆಯೇ ಆಪಾದನೆ ಮಾಡಿದ್ದರು. ಜೈಲಿಗೆ ಹೋದರೂ ರಾಜೀನಾಮೆ ನೀಡದೆ ಅಲ್ಲಿಯೇ ಕುಳಿತು ಕಡತಕ್ಕೆ ಸಹಿ ಹಾಕಿದ್ದರು. ಬೇರೆಯವರಿಗೆ ಅಧಿಕಾರ ವಹಿಸುವ ಬದಲು, ತಾವೇ ಅಧಿಕಾರ ಇಟ್ಟುಕೊಂಡು ಸರ್ಕಾರಿ ಕೆಲಸಗಳನ್ನು ಸ್ಥಗಿತಗೊಳಿಸಿದ್ದರು. ಇವರು ಭ್ರಷ್ಟಚಾರಿ ಎಂದು ಇಂಡಿ ಒಕ್ಕೂಟದ ನಾಯಕರೇ ಹೇಳಿದ್ದರು. ಮಳ್ಳಿಯಂತೆ ಬಂದು, ಕಳ್ಳನಂತೆ ಆಗಿದ್ದಾರೆ ಎಂಬುದು ಜನರಿಗೆ ಅರಿವಾಯಿತು ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಗೂ ಆಡಳಿತ ಬಿಜೆಪಿಯ ಗೆಲುವಿಗೆ ಬಲ ತಂದಿದೆ. ಇದು ಕೇಂದ್ರ ಸರ್ಕಾರದ ಆಡಳಿತಕ್ಕೆ ಸಂದ ಗೆಲುವು. ಜನರು ಇಂಡಿ ಒಕ್ಕೂಟವನ್ನು ತಿರಸ್ಕಾರ ಮಾಡಿದ್ದಾರೆ. ಇಂಡಿ ಒಕ್ಕೂಟ ಒಡೆದು ಚೂರಾಗಿದೆ. ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರೂ ಬೇರೆಯಾಗಿದ್ದಾರೆ. ರಾಹುಲ್‌ ಗಾಂಧಿಯೂ ಸೇರಿದಂತೆ ಒಂದೇ ಕುಟುಂಬದವರು ದೊಡ್ಡ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ದೆಹಲಿಯ ಜನರು ಮೋದಿಯವರ ಆಡಳಿತಕ್ಕೆ ಬೆಲೆ ಕೊಟ್ಟಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

2 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

10 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

10 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

10 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

10 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

10 hours ago