ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹ್ಮಾನ್ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ದೀಪಕ್(21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್(21), ಹಾಗೂ ಬಂಟ್ವಾಳದ ನಿವಾಸಿ ಚಿಂತನ್(19) ಬಂಧಿತರು ಎಂದು ಗುರುತಿಸಲಾಗಿದೆ.
ಬೈಕಿನಲ್ಲಿ ಬಂದು ಅಬ್ದುಲ್ ರೆಹ್ಮಾನ್ ಮೇಲೆ ಹಲ್ಲೆ ಮಾಡಿದ ಇನ್ನಿಬರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದೇವೆ. ಬಂಧಿತ ಮೂವರು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ತಿಳಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಡಿವೈಎಸ್‌ಪಿ ವಿಜಯ ಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.
ಮೃತ ಅಬ್ದುಲ್ ರೆಹ್ಮಾನ್‌ಗೆ ಕರೆ ಮಾಡಿದ್ದ ದೀಪಕ್ ಕಟ್ಟಡ ನಿರ್ಮಾಣಕ್ಕೆ ಒಂದು ಲೋಡ್ ಮರಳು ತರುವಂತೆ ಹೇಳಿದ್ದ. ಅದರಂತೆ ಮರಳು ತಂದು ಇಳಿಸುವಾಗ ರೆಹ್ಮಾನ್ ಮೇಲೆ ತಲವಾರಿನಿಂದ ಹಲ್ಲೆ ನಡೆದಿತ್ತು. ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಬಂಧಿತ ಮೂವರು ಆರೋಪಿಗಳು ನೇರವಾಗಿ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ಎಸ್.ಪಿ ಎನ್.ಯತೀಶ್ ತಿಳಿಸಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…