ರಾಜ್ಯ

ಅಬ್ದುಲ್‌ ರಹ್ಮಾನ್‌ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್‌ ರಹ್ಮಾನ್‌ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ದೀಪಕ್(‌21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್‌(21), ಹಾಗೂ ಬಂಟ್ವಾಳದ ನಿವಾಸಿ ಚಿಂತನ್‌(19) ಬಂಧಿತರು ಎಂದು ಗುರುತಿಸಲಾಗಿದೆ.

ಬೈಕಿನಲ್ಲಿ ಬಂದು ಅಬ್ದುಲ್‌ ರೆಹ್ಮಾನ್‌ ಮೇಲೆ ಹಲ್ಲೆ ಮಾಡಿದ ಇನ್ನಿಬರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದೇವೆ. ಬಂಧಿತ ಮೂವರು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಡಿವೈಎಸ್‌ಪಿ ವಿಜಯ ಪ್ರಸಾದ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮೃತ ಅಬ್ದುಲ್‌ ರೆಹ್ಮಾನ್‌ಗೆ ಕರೆ ಮಾಡಿದ್ದ ದೀಪಕ್‌ ಕಟ್ಟಡ ನಿರ್ಮಾಣಕ್ಕೆ ಒಂದು ಲೋಡ್‌ ಮರಳು ತರುವಂತೆ ಹೇಳಿದ್ದ. ಅದರಂತೆ ಮರಳು ತಂದು ಇಳಿಸುವಾಗ ರೆಹ್ಮಾನ್‌ ಮೇಲೆ ತಲವಾರಿನಿಂದ ಹಲ್ಲೆ ನಡೆದಿತ್ತು. ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಬಂಧಿತ ಮೂವರು ಆರೋಪಿಗಳು ನೇರವಾಗಿ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ‌ ಎಸ್‌.ಪಿ ಎನ್.ಯತೀಶ್‌ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

2 hours ago

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

5 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

5 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

5 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

5 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

6 hours ago