ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಎಂಎಲ್‌ಸಿ ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್ ರೇವಣ್ಣ ಅರ್ಜಿಯನ್ನು ಜುಲೈ. 10ರಂದು ವಿಚಾರಣೆ ನಡೆಸಲಿದೆ.
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೆರೆವಾಸ ಅನುಭವಿಸುತ್ತಿರುವ ಸೂರಜ್ ರೇವಣ್ಣ ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣಕ್ಕೆ ಜಾಮೀನು ಕೋರಿ ಅರ್ಜಿ ದಾಖಲಿಸಿದ್ದಾರೆ. ಈ ಎರಡನೇ ಪ್ರಕರಣದಲ್ಲಿಯೂ ಅವರ ಬಂಧನದ ಭೀತಿಯಿದ್ದು, ಹೀಗಾಗಿ ಅವರು ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಎರಡನೇ ಪ್ರಕಣದಲ್ಲಿ ಸೂರಜ್ ಪರ ವಕೀಲರು ಮಧ್ಯಂತರ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ನ್ಯಾಯಾಲಯದಲ್ಲಿ ಕಾಲಾವಕಾಶ ಕೋರಿದ್ದಾರೆ.
ಇದನ್ನು ಗಮನಿಸಿದ ನ್ಯಾಯಾಲಯ ಆಕ್ಷೇಪಣೆ ಸಲ್ಲಿಸದ ವರೆಗೆ ಯಾವುದೇ ಬಲವಂತದ ಕ್ರಮವಿಲ್ಲ ಎಂದು ಹೇಳಿದ್ದು, ಜಾಮೀನು ವಿಚಾರಣೆ ಅರ್ಜಿಯನ್ನು ಜುಲೈ. 10ಕ್ಕೆ ಮುಂದೂಡಿತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…