ರಾಜ್ಯ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣಗೆ ಬಿಗ್‌ ಶಾಕ್‌

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಲಯದ ಆದೇಶದಿಂದಾಗಿ ಸೂರಾಜ್ ರೇವಣ್ಣ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.

ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೋರಿ ಸೂರಜ್ ರೇವಣ್ಣ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.

ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತು.
ಈ ಹಿಂದೆ ಇದೇ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.

ಹೊಳೆನರಸೀಪುರದ ಜೆಡಿಎಸ್ ಕಾರ್ಯಕರ್ತ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದರು. ವಿಚಾರಣೆ ನಡೆಸಿದ ಹೊಳೆನರಸೀಪುರ ಪೊಲೀಸರು ಅವರನ್ನು ಬಂಧನಕ್ಕೆ ಒಳಪಡಿಸಿದ್ದರು.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆಸಿದ ನಂತರ ಸಾಕ್ಷಿಗಳನ್ನು ನಾಶಪಡಿಸಬಹುದೆಂಬ ಹಿನ್ನೆಲೆಯಲ್ಲಿ ನ್ಯಾಯಾಲಯ ಸೂರಜ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು ಅಂತಿಮವಾಗಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಹಾಕಿದ್ದರು.

ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್.22ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್.23ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಯಕಿ ಮಂಗ್ಲಿಯಿಂದ ೧೦ ಕೋಟಿ ವಂಚನೆ, ಕೊಲೆ ಬೆದರಿಕೆ ಆರೋಪ

ಬೆಂಗಳೂರು: ಗಾಯಕಿ ಮಂಗ್ಲಿ ಮತ್ತು ಅವರ ಸಹೋದರನ ವಿರುದ್ಧ ೧೦ ಕೋಟಿ ರೂ. ಮೋಸದ ಆರೋಪದಡಿ ಪಂಜಗುಟ್ಟ ಪೊಲೀಸರು ಪ್ರಕರಣ…

19 mins ago

ರಾಜ್ಯದ ಒಳನಾಡಿನ ಜಿಲ್ಲೆಗಳಲ್ಲಿ ಒಂದು ವಾರ ಮಳೆ, ಕರಾವಳಿಯಲ್ಲಿ ಬಿಸಿ ಗಾಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ…

46 mins ago

ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ

ದಾವಣಗೆರೆ: ಉಪಚುನಾವಣೆ ಮುಗಿದ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ನೀಡಿದ್ದಾರೆ. ಎಐಸಿಸಿ ಉಸ್ತುವಾರಿ…

53 mins ago

ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ

ಬೆಂಗಳೂರು: ಸಾಂಸ್ಕೃತಿಕ ನಗರ ಮೈಸೂರಿನ ಅಶೋಕಪುರಂ ರೈಲು ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ವದಂತಿಯನ್ನು ಕೇಂದ್ರ ರೈಲ್ವೆ ಸಚಿವ…

1 hour ago

ವಿದ್ಯಾವಂತರೇ ಹೆಚ್ಚಾಗಿ ಕರ್ಮ‌ ಸಿದ್ಧಾಂತ ಪಾಲಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬೀದರ್: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.…

2 hours ago

ಶ್ರವಣದೋಷ ಮೆಟ್ಟಿನಿಂತು ಸಾಧನೆ ಮಾಡಿದ ಮಹದೇವ ಪ್ರಸಾದ್ ಕೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕು ದೊಡ್ಡಕವಲಂದೆ ಹೋಬಳಿಯ ದೊಡ್ಡಕವಲಂದೆ ಗ್ರಾಮದ ಕಾಂತರಾಜು ಮತ್ತು ಮಹೇಶ್ವರಿ ದಂಪತಿಗಳ ಪುತ್ರ ಮಹದೇವ…

2 hours ago