Big Relief for MLC Suraj Revanna: 'B' Report Submitted by CID
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಪುತ್ರ ಸೂರಜ್ ರೇವಣ್ಣ ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಲಯದ ಆದೇಶದಿಂದಾಗಿ ಸೂರಾಜ್ ರೇವಣ್ಣ ಅವರಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ.
ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ಕೋರಿ ಸೂರಜ್ ರೇವಣ್ಣ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದ್ದರು.
ಮಂಗಳವಾರ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ ಮರು ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿತು.
ಈ ಹಿಂದೆ ಇದೇ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು.
ಹೊಳೆನರಸೀಪುರದ ಜೆಡಿಎಸ್ ಕಾರ್ಯಕರ್ತ ತಮ್ಮ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದರು. ವಿಚಾರಣೆ ನಡೆಸಿದ ಹೊಳೆನರಸೀಪುರ ಪೊಲೀಸರು ಅವರನ್ನು ಬಂಧನಕ್ಕೆ ಒಳಪಡಿಸಿದ್ದರು.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಾದ ಪ್ರತಿವಾದ ನಡೆಸಿದ ನಂತರ ಸಾಕ್ಷಿಗಳನ್ನು ನಾಶಪಡಿಸಬಹುದೆಂಬ ಹಿನ್ನೆಲೆಯಲ್ಲಿ ನ್ಯಾಯಾಲಯ ಸೂರಜ್ ರೇವಣ್ಣ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು ಅಂತಿಮವಾಗಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿಗೆ ಹಾಕಿದ್ದರು.
ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂರಜ್ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್.22ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್.23ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…