ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ ಇಂದು ಮಹತ್ವದ ಘೋಷಣೆ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು.
ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.
ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…