ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್ ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.
ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದೆ.
ಈ ಪ್ರಕರಣದಲ್ಲಿ ಡಿಜಿಪಿ ಕೆ.ರಾಮಚಂದ್ರ ರಾವ್ ಅವರು ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ತನಿಖೆ ನಡೆಸಲು ಗುಪ್ತ ಅವರನ್ನು ನೇಮಿಸಲಾಗಿದೆ. ಒಂದು ವಾರದ ಒಳಗೆ ಪ್ರಕರಣದ ತನಿಖೆ ವರದಿ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.





