ರಾಜ್ಯ

ಹಿರಿಯ ಅಧಿಕಾರಿಗಳ ದುರುಪಯೋಗ: ಬಸವರಾಜ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್‌ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಸ್ವಜನ ಪಕ್ಷಪಾತ ಮಾಡುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತುಗಳು ಬರುತ್ತಿವೆ. ರಾಜ್ಯದಲ್ಲಿ ಇಂತಹ ಕೆಳಮಟ್ಟದ ರಾಜಕೀಯ ಹಿಂದೆ ಯಾವಾಗಲೂ ಆಗಿಲ್ಲ. ರಾಜ್ಯ ಸರ್ಕಾರ ತಮ್ಮ ಮೇಲೆ ಆರೋಪದ ಕಪ್ಪುಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನವಾಗುತ್ತಿದೆ. ಈ ಕೆಲಸ ಬಹಳಷ್ಟು ದಿನ ನಡೆಯುವುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

14 mins ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

27 mins ago

ರಾಜ್ಯದಲ್ಲಿ ಹೆಚ್ಚಿದ ಗರಿಷ್ಠ ತಾಪಮಾನ: ಚರ್ಮದ ಬಗ್ಗೆ ಇರಲಿ ಎಚ್ಚರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ತಾಪಮಾನ ಹೆಚ್ಚಾಗಿದ್ದು, ಬಿಸಿಲ ಝಳ ಆರಂಭವಾಗಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ. ಕರಾವಳಿ…

1 hour ago

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ: ಭಾವುಕ ಪೋಸ್ಟ್‌ ಹಾಕಿದ ರಾಘವೇಂದ್ರ

ಬೆಂಗಳೂರು: ಕರ್ನಾಟಕದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷಗಳು ತುಂಬಿದೆ. ಇಂದು ನಡೆಯುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ…

2 hours ago

ಓದುಗರ ಪತ್ರ: ಐದು ವರ್ಷಕ್ಕೊಮ್ಮೆ ಆಸ್ತಿ ತೆರಿಗೆ ಪರಿಷ್ಕರಿಸಿ

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ…

2 hours ago

ಓದುಗರ ಪತ್ರ: ಮ್ಯಾನ್ ಹೋಲ್ ಸ್ವಚ್ಛಗೊಳಿಸಿ

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ…

2 hours ago