Mysore
33
few clouds

Social Media

ಮಂಗಳವಾರ, 08 ಏಪ್ರಿಲ 2025
Light
Dark

2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, 2025ರ ಏಪ್ರಿಲ್.‌11ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ.29ರಿಂದ ಶಾಲೆಗಳು ಪುನರಾರಂಭವಾಗಲಿವೆ.

ಮೇ.29ರಿಂದ ಸೆಪ್ಟೆಂಬರ್.19ರವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್.‌8ರಿಂದ 2026ರ ಏಪ್ರಿಲ್.‌10ರವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ.

ಸೆಪ್ಟೆಂಬರ್.‌20ರಿಂದ ಅಕ್ಟೋಬರ್.‌7ರವರೆಗೆ ದಸರಾ ರಜೆ ಇರಲಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 123 ದಿನ ರಜೆ ಇರುತ್ತದೆ. ಉಳಿದ 242 ದಿನಗಳು ಶಾಲೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಇದು ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಫ್ರೌಢಶಾಲೆಗಳಿಗೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.

 

 

Tags: