ಹಾಸನ: ಹಾಸನ ಹೊರ ಹೊಲಯದ ಈಚನಹಳ್ಳಿ ಬಳಿ ಇಂದು (ಮೇ.೨೬) ಬೆಳ್ಳಂಬೆಳಗ್ಗೆಯೇ ರಸ್ತೆ ಅಪಘಾತ ಸಂಭವಿಸಿದ್ದು, ಮಗು ಸೇರಿದಂತೆ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರು ಹಾಗೂ ಟ್ರಕ್ ನಡುವೆ ನಡೆದ ಅಪಘಾತದಲ್ಲಿ ಮಗು, ಮೂವರು ಮಹಿಳೆಯರು ಮತ್ತು ಇಬ್ಬರು ಪುರುಷರು ಅಪಘಾತದಲ್ಲಿ ಮಡಿದಿದ್ದಾರೆ.
ಘಟನಾ ಸ್ಥಳಕ್ಕಾಗಮಿಸಿದ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಪರಿಶೀಲನೆ ನಡೆಸಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.