ರಾಜ್ಯ

ಕರ್ನಾಟಕದಲ್ಲಿ ಚುರುಕುಗೊಂಡ ಮುಂಗಾರು: ರೈತರ ಮೊಗದಲ್ಲಿ ಮಂದಹಾಸ

ಬೆಂಗಳೂರು: ನೈಋತ್ಯ ಮುಂಗಾರು ಕರ್ನಾಟಕದಲ್ಲಿ ಮುಂದುವರಿದು ವ್ಯಾಪಕವಾಗಿ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ವರುಣನ ಅಬ್ಬರ ಜೋರಾಗುವ ಸ್ಪಷ್ಟ ಮುನ್ಸೂಚನೆ ಇದೆ.

ಭಾರತೀಯ ಹವಾಮಾನ ಇಲಾಖೆ ನೀಡಿರುವ ಹವಾಮಾನ ವರದಿಯ ಪ್ರಕಾರ, ಇಂದು ಕರಾವಳಿ, ಮಲೆನಾಡು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

ಮುಂಗಾರು ಮಳೆಯು ಕರಾವಳಿಯಿಂದ ಒಳನಾಡಿಗೆ ವ್ಯಾಪಿಸುತ್ತಿರುವುದರಿಂದ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಲಿದ್ದು, ರಾಜ್ಯದ ಜನರಿಗೆ ಬೇಸಿಗೆಯ ಬಿಸಿಲಿನ ತಾಪದಿಂದ ಸಂಪೂರ್ಣ ಮುಕ್ತಿ ಸಿಕ್ಕಿದೆ.

ಹವಾಮಾನ ಇಲಾಖೆಯ ಅಧಿಕೃತ ಮುನ್ಸೂಚನೆಯಂತೆ, ರಾಜ್ಯದ 13 ಪ್ರಮುಖ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಖ್ಯವಾಗಿ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ.

ಈ ಜಿಲ್ಲೆಗಳ ಜನರಿಗೆ ಹವಾಮಾನ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರಗಳು ತೀವ್ರ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿ ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಮುಂದಿನ 3 ರಿಂದ 4 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇದರೊಂದಿಗೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಕಾರಣ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಅದೇ ರೀತಿ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಸಿಡಿಲಿನ ಎಚ್ಚರಿಕೆ ರವಾನಿಸಲಾಗಿದೆ. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದಿನವಿಡೀ ಮೋಡಕವಿದ ತಂಪಾದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ತಾಪಮಾನ 29 ರಿಂದ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮಳೆಯ ಕಾರಣದಿಂದಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ದಟ್ಟಣೆ ಮತ್ತು ಅಂಡರ್ ಪಾಸ್?ಗಳಲ್ಲಿ ನೀರು ನಿಲ್ಲುವ ಸಮಸ್ಯೆ ಎದುರಾಗಬಹುದಾದ್ದರಿಂದ, ಕೆಲಸಕ್ಕೆ ಹೋಗುವವರು ರೇನ್ ಕೋಟ್, ಛತ್ರಿಗಳೊಂದಿಗೆ ಮನೆಯಿಂದ ಹೊರಡುವುದು ಉತ್ತಮ ಎಂದು ಸಲಹೆ ನೀಡಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

5 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago