ಮೈಸೂರು: ಕೆಎಸ್ಆರ್‌ಟಿಸಿಯ ಎಲೆಕ್ಟ್ರಿಕ್ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಈ ಅಪಘಾತದಲ್ಲಿ ಜೀಪ್ ಚಾಲಕ ಸೇರಿದಂತೆ ಸಾಲ್ವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ.
ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಎಲೆಕ್ಟ್ರಿಕ್ ಬಸ್ ಮತ್ತು ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಅಪಘಾತ ಸಂಭವಿಸಿದೆ. ಜೀಪಿನಲ್ಲಿ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜೀಪಿನಲ್ಲಿದ್ದವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.





