ರಾಜ್ಯ

ಎಲೆಕ್ಟ್ರಿಕ್‌ ಬಸ್‌-ಜೀಪ್‌ ನಡುವೆ ಅಪಘಾತ: ನಾಲ್ಕು ಸಾವು

ಮೈಸೂರು: ಕೆಎಸ್ಆರ್‌ಟಿಸಿಯ ಎಲೆಕ್ಟ್ರಿಕ್‌ ಬಸ್ ಮತ್ತು ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಜನರು ಮೃತಪಟ್ಟಿರುವ ಘಟನೆ ಹುಣಸೂರು ಪಟ್ಟಣದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿ ನಡೆದಿದೆ. ಈ ಅಪಘಾತದಲ್ಲಿ ಜೀಪ್​ ಚಾಲಕ ಸೇರಿದಂತೆ ಸಾಲ್ವರು ಸ್ಥಳದಲ್ಲೇ ಸಾವೀಗಿಡಾಗಿದ್ದಾರೆ.

ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಎಲೆಕ್ಟ್ರಿಕ್‌ ಬಸ್ ಮತ್ತು ಹುಣಸೂರಿನಿಂದ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಜೀಪ್ ನಡುವೆ ಅಪಘಾತ ಸಂಭವಿಸಿದೆ. ಜೀಪಿನಲ್ಲಿ ಒಟ್ಟು ಆರು ಮಂದಿ ಪ್ರಯಾಣ ಬೆಳೆಸುತ್ತಿದ್ದರು. ಇವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜೀಪಿನಲ್ಲಿದ್ದವರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

andolanait

Recent Posts

ಮೈಸೂರು ಮುಡಾ ಕಚೇರಿಗೆ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಭೇಟಿ

ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…

9 hours ago

ಪ್ರಧಾನಿ ನರೇಂದ್ರ ಮೋದಿ ಸಂವಿಧಾನವನ್ನೇ ಓದಿಲ್ಲ ಎಂದ ರಾಹುಲ್‌ ಗಾಂಧಿ

ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…

9 hours ago

ಆದಿವಾಸಿಗಳ ಸಮಸ್ಯೆ ಆಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…

9 hours ago

ರಾಜ್ಯದಲ್ಲಿ ನವೆಂಬರ್.‌14ರಿಂದ ಮತ್ತೆ ಮಳೆಯ ಅಬ್ಬರ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…

9 hours ago

ಶಬರಿಮಲೆಗೆ ತೆರಳುವವರಿಗೆ ಸಿಹಿಸುದ್ದಿ ನೀಡಿದ ಕೆಎಸ್‌ಆರ್‌ಟಿಸಿ

ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…

10 hours ago

ಕಾಂಗ್ರೆಸ್‌ ವಿರುದ್ಧ ಮತ್ತೆ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್‌ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…

10 hours ago