Mysore
13
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ

ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ-ಚಿತ್ರದುರ್ಗ ರಿಂಗ್‌ ರಸ್ತೆಯಲ್ಲಿ ಘಟನೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Tags:
error: Content is protected !!