ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಸೈಯದ್ ಪಾಷಾ, ಯೂನಿಫ್ ಖಾನ್, ಅಜರ್ ಪಾಷ ಎಂದು ಗುರುತಿಸಲಾಗಿದೆ. ಫರಾಜ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇಂದು ಬೆಳಗಿನ ಜಾವ 3 ಗಂಟೆಯ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.





