ರಾಜ್ಯ

೨ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಸಾವು

ಶಿವಮೊಗ್ಗ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಲಯನ್‌ ಸಫಾರಿ ಬಳಿ ನಡೆದಿದೆ. ಶಿವಮೊಗ್ಗದಿಂದ ಸಾಗರ ಕಡೆ ತೆರಳುತ್ತಿದ್ದ ಕಾರು ಹಾಗೂ ಸಾಗರದಿಂದ ಶಿವಮೊಗ್ಗ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೆ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿದೆ. ಗಾಯಾಳುಗಳನ್ನ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

25 mins ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

46 mins ago

ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಮೊಗಿಲಯ್ಯ ವಿಧಿವಶ

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…

1 hour ago

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…

1 hour ago

ಕಾಶ್ಮೀರದಲ್ಲಿ ಭರ್ಜರಿ ಬೇಟೆಯಾಡಿದ ಭಾರತೀಯ ಸೇನೆ: ಐವರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್‌…

2 hours ago

ಅಪರಿಚಿತ ವಾಹನ ಡಿಕ್ಕಿ: ಜಿಂಕೆ ಸಾವು

ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…

2 hours ago