ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.
ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ.
ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏರ್ ಆಂಬುಲೆನ್ಸ್ ಮೂಲಕ ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು
ಈ ಮಧ್ಯೆ ದೆಹಲಿ ನಿವಾಸಿ ಆಯುಕ್ತರಾದ ಇಂಕೊಂಗ್ಲ ಜಮೀರ್ ಅವರು ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪಟಿಯಾಲದ ಆಸ್ಪತ್ರೆ ವೈದ್ಯರ ಜೊತೆ ಸತತ ಸಂಪರ್ಕದಲ್ಲಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಅಧಿಕಾರಿಗಳು ನಿನ್ನೆ ಏರ್ ಆಂಬುಲೆನ್ಸ್ ಸಜ್ಜುಗೊಳಿಸಿದ್ದರು.
ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…