ಬೆಳಗಾವಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಏಳು ಮಂದ ಕನ್ನಡಿಗರರು ಸಾವನ್ನಪ್ಪಿದ್ದಾರೆ.
144 ವರ್ಷಗಳಿಗೊಮ್ಮೆ ಮಹಾಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಪುಣ್ಯಸ್ನಾನಕ್ಕೆ ತೆರಳುತ್ತಿದ್ದ ಬೆಳಗಾವಿ ಗೋಕಾಕ್ ನಗರದ ಏಳು ಮಂದಿ ಮರಣ ಹೊಂದಿದ್ದಾರೆ.
ಈ ದುರ್ಮರಣ ಮಧ್ಯಪ್ರದೇಶದ ಜಬಲಪೂರ ಪೆಹರಾ ಟೋಲ್ ನಾಕಾ ಬಳಿ ಬೆಳಗಿನ ಜಾವ ಕ್ರೂಸರ್ ಹಾಗೂ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಏಳು ಮಂದಿ ಕನ್ನಡಿಗರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಎರಡು ದಿನಗಳ ಹಿಂದೆ ಅಷ್ಟೇ ಗೋಕಾಕ್ ನಗರದಿಂದ 10 ಮಂದಿ ಕ್ರೂಸರ್‌ನಲ್ಲಿ ಮಹಾಕುಂಭಮೇಳಕ್ಕೆ ಹೊರಟಿದ್ದರು. ಆದರೆ ಇಂದು(ಫೆಬ್ರವರಿ.24) ಮುಂಜಾನೆ ಮಧ್ಯಪ್ರವೇಶದ ಸಮೀಪದಲ್ಲಿ ಕ್ರೂಸರ್‌ಗೆ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಈ ಅಪಘಾತ ಸಂಭವಿಸಿದೆ.





