ರಾಜ್ಯ

ಆಕಸ್ಮಿಕ ಬೆಂಕಿ : ಯಮಹಾ ಬೈಕ್‌ ಸಾಗಿಸುತ್ತಿದ್ದ ಲಾರಿ ಭಸ್ಮ : ಸುಟ್ಟು ಕರಕಲಾದ 40ಬೈಕ್‌ಗಳು

ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.

ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಿಂದ ಏಕಾಏಕಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಭಾರಿಯಾಗಿ ಹೊತ್ತಿಕೊಂಡಿದೆ. ಚೆನೈಯಿಂದ ಬಳ್ಳಾರಿಗೆ ಬೈಕ್‌ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್‌ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಇದನ್ನು ಓದಿ: ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಘಟನೆಯಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿದ್ದು, ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಅವಘಡದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

3 hours ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

3 hours ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

3 hours ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

3 hours ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

4 hours ago