ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ.ಸತ್ಯವರ ಗ್ರಾಮದ ಸಮೀಪದ ಹೊಸಕೋಟೆ-ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿ (NH-648) ಮತ್ತು ಸ್ಯಾಟಲೈಟ್ ಟೌನ್ ರಿಂಗ್ ರೋಡ್ (STRR) ಬಳಿ ಶುಕ್ರವಾರ ಬೆಳಗ್ಗೆ ನಸುಕಿನ ಜಾವದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಏಳು ಮಂದಿ ಸ್ಥಳದಲ್ಲಿಯೇ ದುರ್ಮರಣಕ್ಕೀಡಾಗಿದ್ದಾರೆ.
ಅಪಘಾತದಲ್ಲಿ ಎಕ್ಸ್‌ಯುವಿ 700 ಕಾರು, ಬೈಕ್ ಮತ್ತು ಕ್ಯಾಂಟರ್ ಟ್ರಕ್ ನಡುವೆ ಸರಣಿ ಡಿಕ್ಕಿ ಉಂಟಾಗಿದೆ. ದೇವನಹಳ್ಳಿ ಕಡೆಗೆ ಹೋಗುತ್ತಿದ್ದ ಎಕ್ಸ್‌ಯುವಿ ಕಾರು ಅತಿವೇಗದಿಂದ ಬೈಕ್‌ಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದ್ದು, ನಂತರ ನಿಯಂತ್ರಣ ತಪ್ಪಿ ಕ್ಯಾಂಟರ್ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು:
– ಕಾರಿನಲ್ಲಿದ್ದ ಆರು ಮಂದಿ (ಅವರಲ್ಲಿ ಹಲವರು ಕಾಲೇಜು ವಿದ್ಯಾರ್ಥಿಗಳು, ವಯಸ್ಸು 17-18 ವರ್ಷದ ನಡುವೆ)
– ಬೈಕ್ ಸವಾರ (ರಾತ್ರಿ ಶಿಫ್ಟ್ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ 26 ವರ್ಷದ ಗಗನ್ ಎಂಬಾತ)
ಮೃತರಲ್ಲಿ ಹೆಚ್ಚಿನವರು ಬೆಂಗಳೂರಿನ ಕೊತ್ತನೂರು (Kothanur) ಮೂಲದವರು ಎಂದು ಗುರುತಿಸಲಾಗಿದೆ. ಸ್ನೇಹಿತರ ಜೊತೆಗೆ ಜಾಯ್‌ರೈಡ್‌ಗೆ ಹೋಗಿದ್ದಾ ಈ ಘಟನೆ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿದ್ದು, ಶವಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ಕಾರಣ ಅತಿವೇಗದ ಚಾಲನೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯ ಸ್ಥಳದಲ್ಲಿ ಏರ್‌ಬ್ಯಾಗ್‌ಗಳು ಸ್ಫೋಟಗೊಂಡಿದ್ದರೂ ತೀವ್ರ ಪ್ರಭಾವದಿಂದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮತ್ತಷ್ಟು ತನಿಖೆ ನಡೆಸುತ್ತಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…