ಬೆಂಗಳೂರು : ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಿ ಪರಿಹಾರ ನೀಡುವ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಭರವಸೆ ನೀಡಿದರು. ರಾಜ್ಯದಲ್ಲಿನ ವಲಸೆ ಕುರಿಗಾರರ ಮತ್ತು ಅವರ ಸ್ವತ್ತುಗಳ ಮೇಲಿನ ದೌರ್ಜನ್ಯ ತಡೆಯುವ ಕಾಯ್ದೆ ರೂಪಿಸುವುದು, ಕುರಿಗಳಿಗೆ ಉಚಿತ ಲಸಿಕೆ ನೀಡಲೂ ಅಗತ್ಯ ಸೂಚನೆ ನೀಡಲಾಗುವುದು ಎಂದರು.
ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ ನೀಡಲು ವ್ಯವಸ್ಥೆ ಮಾಡಲಾಗುವುದು. ಈ ಗುರುತಿನ ಚೀಟಿ ಆಧಾರದ ಮೇಲೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಕೇರಂ ಕೈಗೊಳ್ಳಲಾಗುವುದು ಎಂದರು.
ಬಂದೂಕು ಪರವಾನಗಿ ನೀಡಲು ವ್ಯವಸ್ಥೆ, ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ಮೇರೆಗೆ ಪ್ರವೇಶ ನೀಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು ಇವುಗಳಿಗೆ ಸರ್ಕಾರಿ ಆದೇಶ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಪಶುಸಂಗೋಪನಾ ಇಲಾಖೆಯಲ್ಲಿ 1300 ವೈದ್ಯರ ಹುದ್ದೆ ಖಾಲಿ ಇದ್ದು, ಪ್ರಸ್ತುತ 400 ವೈದ್ಯರನ್ನು ನೇಮಕ ಮಾಡಲಾಗುತ್ತಿದೆ. ಮುಂದಿನ ವರ್ಷ ಬಾಕಿ ವೈದ್ಯರ ನೇಮಕಾತಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕುರಿಗಾರರು ಕ್ಯಾಂಪ್ ಮಾಡಿರುವ ಕಡೆಗಳಲ್ಲೇ ವೈದ್ಯರು ಬಂದು ಚಿಕಿತ್ಸೆ ನೀಡಬೇಕು ಎಂದು ಸೂಚಿಸಲಾಗುವುದು. ಕುರಿಗಾರರ ಕುರಿ ಕಳ್ಳತನವಾದರೆ ಕೂಡಲೇ ಪ್ರಕರಣ ದಾಖಲು ಮಾಡಬೇಕು, ಬಂಧಿಸಿ ತನಿಖೆ ಮಾಡಲು ಹಾಗು ರಕ್ಷಣೆ ನೀಡುವ ವ್ಯವಸ್ಥೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಹಿಂದಿನ ಸರ್ಕಾರ ಸತ್ತ ಕುರಿಗಳಿಗೆ ನೀಡುವ ಅನುಗ್ರಹ ಯೋಜನೆಯನ್ನು ನಿಲ್ಲಿಸಿದ್ದು, ಈ ಕುರಿತು ಪರಿಹಾರ ನೀಡುವ ಬಗ್ಗೆ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಲಾಗುವುದು ಎಂದರು.
ಗೋಮಾಳಗಳನ್ನು ಯಾರಿಗೂ ಪರಭಾರೆ ಮಾಡಬಾರದೆಂದು ಈ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಆದೇಶ ಹೊರಡಿಸಲಾಗಿತ್ತು. ಗೋಮಾಳಗಳ ರಕ್ಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಭರವಸೆ ನೀಡಿದರು.
ಪಶುಸಂಗೋಪನಾ ಸಚಿವ ವೆಂಕಟೇಶ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರಪ್ಪ ವರ್ತೂರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ, ಪಶು ಸಂಗೋಪನಾ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಉಪಸ್ಥಿತರಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…