ರಾಜ್ಯ

ತಮಿಳುನಾಡಿನಂತೆ ರಾಜ್ಯದಲ್ಲೂ RSS ವಿರುದ್ಧ ಕ್ರಮ : ಸಿಎಂ

ಬಾಗಲಕೋಟೆ : ಸರ್ಕಾರಿ ಸ್ಥಳದಲ್ಲಿ ಆರ್.ಎಸ್.ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಸೋಮವಾರ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ಸುಧಾರಿಸಿದೆ, ಇನ್ನೆರಡು ದಿನದಲ್ಲಿ ಆಸ್ಪತ್ರೆಯಿಂದ ಮನೆಗೆ ತೆರಳಿಲಿದ್ದಾರೆ ಎಂದರು.

ಇದನ್ನು ಓದಿ : ಆರ್‌ಎಸ್‌ಎಸ್‌ ಬ್ಯಾನ್‌ ಅಂತಾ ನಾನು ಹೇಳಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ

ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಸಂಬಂಧವಿಲ್ಲ
ರಾಜ್ಯದಲ್ಲಿ ಬದಲಾವಣೆಯಲ್ಲಿ ಹೈಕಮಾಂಡ್ ನವರ ನಿರ್ಧಾರವೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿಕೆಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಪಕ್ಷದ ವರಿಷ್ಠರ ಮತ್ತು ಶಾಸಕರ ಅಭಿಪ್ರಾಯ ಬಹಳ ಮುಖ್ಯ. ಶಾಸಕರ ಒಮ್ಮತ ಹಾಗೂ ಹೈಕಮಾಂಡ್ ನ ಆರ್ಶೀವಾದವಿರಬೇಕು. ಇಂದಿನ ಭೋಜನಕೂಟ ಕಾರ್ಯಕ್ರಮದಲ್ಲಿ ಯಾವುದೇ ವಿಶೇಷತೆ ಇಲ್ಲ. ಸಂಪುಟ ಪುನರ್ರಚನೆಗೂ ಇಂದಿನ ಭೋಜನಕೂಟಕ್ಕೂ ಯಾವುದೇ ಸಂಬಂಧವಿಲ್ಲ. ನವೆಂಬರ್ ತಿಂಗಳಲ್ಲಿ ಯಾವುದೇ ಕ್ರಾಂತಿಯೂ ಇಲ್ಲ ಎಂದರು.

ನನಗೆ ಮಾಟಮಂತ್ರಗಳಲ್ಲಿ ನಂಬಿಕೆಯಿಲ್ಲ
ಶಾಸಕ ಮುನಿರತ್ನ ಮತ್ತು ಡಿಕೆ ಶಿವಕುಮಾರ್ ಅವರ ನಡೆದ ಮಾತುಕತೆಯ ಬಗ್ಗೆ ಪ್ರತಿಕ್ರಿಯೆ ನೀಡಿ, ಡಿಸಿಎಂ ಡಿ ಕೆ ಶಿವಕುಮಾರ್ ರವರು ನಿನ್ನೆ ಬೆಂಗಳೂರು ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಲಾಲ್ಬಾಗ್ ನಂತೆ ಮತ್ತಿಕರೆಯ ಜೆ ಪಿಪಾರ್ಕ್ ದಲ್ಲಿಯೂ ಕಾರ್ಯಕ್ರಮವಿತ್ತು. ಶಾಸಕ ಮುನಿರತ್ನರವರು ವೇದಿಕೆಗೆ ಆಗಮಿಸಿ, ತಮ್ಮ ಅಭಿಪ್ರಾಯವನ್ನು ನೀಡಬಹುದಾಗಿತ್ತು. ಆದರೆ ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಲಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನವಿತ್ತೇ ಇಲ್ಲವೇ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ . ನಾನು ಯಾವುದೇ ಮಾಟಮಂತ್ರಗಳಲ್ಲಿ ನಂಬಿಕೆಯಿರಿಸಿಲ್ಲ ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಸೂಕ್ತ ಅನುದಾನ ನೀಡಿ, ಮುಂದಿನ ನಾಲ್ಕು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಸಂಪುಟ ಪುನರ್ರಚನೆ
ವಾಲ್ಮೀಕಿ ಸಮಾಜದವರಿಗೆ ಸಚಿವ ಸ್ಥಾನ ನೀಡಲಾಗುವುದೇ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರು ರಾಜಿನಾಮೆ ನೀಡಿದ್ದು, ಸರ್ಕಾರ ಅವರನ್ನು ತೆಗೆದುಹಾಕಿಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಸಂಪುಟ ಪುನರ್ರಚನೆಯ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

13 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

23 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

45 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago