ರಾಜ್ಯ

ಭ್ರೂಣ ಹತ್ಯೆಯಲ್ಲಿ ಭಾಗಿಯಾಗಿರುವವರ ಮೇಲೆ ಕ್ರಮ: ಸಿದ್ದರಾಮಯ್ಯ

ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.

ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತಪ್ಪು ಯಾರೇ ಮಾಡಿದ್ದರು ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮತ್ತು ಈ ಬಗ್ಗೆ ಸಭೆ ನಡೆಸಿ ಸೂಕ್ರ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರ ಹೇಳಿಕೆಗೆ ಪಾಪ ವಿಪಕ್ಷ ನಾಯಕರು ಏನೇನೋ ಮಾತನಾಡುತ್ತಾರೆ, ಮಾತನಾಡಲಿ ಬಿಡಿ ಎಂದು ಪ್ರತಿಕ್ರಿಯಿಸಿದರು.

ಇನ್ನೂ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಈ ಬಗ್ಗೆ ಆಮೇಲೆ ಮಾತನಾಡುತ್ತೇನೆಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇದೇ ವೇಳೆ ತೆಲಂಗಾಣ ಚುನವಾಣೆ ಸಂಬಂಧ ನಾವು ಶೇ ೧೦೦ ರಷ್ಟು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅರ್ಪಿಸಲಾಯಿತು. ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು.

ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ತಿಳಿಸಿದರು.

ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

9 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago