ಬೆಂಗಳೂರು : ಭ್ರೂಣ ಹತ್ಯೆ ಪ್ರಕರಣದಲ್ಲಿರುವವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದ್ದಾರೆ.
ಸಂವಿಧಾನ ಸಮರ್ಪಣಾ ದಿನಾಚರಣೆ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ತಪ್ಪು ಯಾರೇ ಮಾಡಿದ್ದರು ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮತ್ತು ಈ ಬಗ್ಗೆ ಸಭೆ ನಡೆಸಿ ಸೂಕ್ರ ನಿರ್ಣಯ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಹೇಳಿಕೆಗೆ ಪಾಪ ವಿಪಕ್ಷ ನಾಯಕರು ಏನೇನೋ ಮಾತನಾಡುತ್ತಾರೆ, ಮಾತನಾಡಲಿ ಬಿಡಿ ಎಂದು ಪ್ರತಿಕ್ರಿಯಿಸಿದರು.
ಇನ್ನೂ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಈ ಬಗ್ಗೆ ಆಮೇಲೆ ಮಾತನಾಡುತ್ತೇನೆಂದು ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಇದೇ ವೇಳೆ ತೆಲಂಗಾಣ ಚುನವಾಣೆ ಸಂಬಂಧ ನಾವು ಶೇ ೧೦೦ ರಷ್ಟು ಗೆದ್ದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್.ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅರ್ಪಿಸಲಾಯಿತು. ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಹೇಳಿದರು.
ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಎಚ್ಚರಿಕೆಯ ಮಾತುಗಳನ್ನು ಹೇಳಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ತಿಳಿಸಿದರು.
ರಾಷ್ಟ್ರಕವಿ ಕುವೆಂಪು ಹೇಳಿದಂತೆ ‘ಸರ್ವ ಜನಾಂಗದ ಶಾಂತಿಯ ತೋಟ’ ಎನ್ನುವಂತಹ ಸಮಾಜ ನಿರ್ಮಾಣವಾಗಬೇಕೆಂದು. ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ನಡೆಯಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡುತ್ತಿದೆ. ಸಂವಿಧಾನದ ಪೀಠಿಕೆಯಲ್ಲಿ ಇದರ ಸಾರವಿದೆ. ಶಾಲೆಗಳಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಸರ್ಕಾರದ ಈ ಕ್ರಮದಿಂದ ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಅರಿತು ನಡೆಯಲು ಸಾಧ್ಯವಾಗುತ್ತದೆ ಎಂದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…