ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಜಾಸ್ತಿಯಿದ್ದು, ಇದಕ್ಕೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಹಲವಾರು ಜನರು ಸಾಂಪ್ರದಾಯಿಕ ವೈದ್ಯ ಪದ್ಧತಿ ಮತ್ತು ಹಳೆಯ ವೈದ್ಯಕೀಯ ಪದ್ಧತಿಗಳನ್ನು ಅಭ್ಯಾಸ ಮಾಡುತ್ತಿದ್ದಾರೆ.
ಈ ಸಮಸ್ಯೆ ರಾಜ್ಯಾದ್ಯಂತ ಆತಂಕ ಸೃಷ್ಟಿಸಿದ್ದು, ರಾಜ್ಯದಲ್ಲಿನ ಸಿಬ್ಬಂದಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.
ನಾಯಿಕೊಡೆಗಳಂತೆ ತಲೆ ಎತ್ತುತ್ತಿರುವ ನಕಲಿ ಕ್ಲಿನಿಕ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿರುವ ವೈದ್ಯರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇನ್ನು ರಾಜ್ಯದಲ್ಲಿನ ಸಿಬ್ಬಂದಿ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಳೆದ ಐದು ವರ್ಷದಲ್ಲಿ ಭರ್ತಿಯಾಗದೇ ಉಳಿದಿದ್ದ ಖಾಲಿ ಹುದ್ದೆಗಳಿಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಿಮಗೆ ನಕಲಿ ಕ್ಲಿನಿಕ್‌ಗಳು ಎಂದು ಗೊತ್ತಾದರೆ, ಕೂಡಲೇ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ. ಆಗ ಅಂತಹ ಕ್ಲಿನಿಕ್ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜನತೆಗೆ ಮನವಿ ಮಾಡಿದರು.